ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಕಚೇರಿಯಲ್ಲಿ ರಂಗೇರಿದ ರಾಜಕೀಯ

By Staff
|
Google Oneindia Kannada News

Congress in K'taka presents a united faceಬೆಂಗಳೂರು, ಮಾ.21: ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಎಸ್.ಎಂ.ಕೃಷ್ಣ ಕಾರ್ಯಕರ್ತರಿಗೆ ಶುಕ್ರವಾರ ಮನವಿ ಮಾಡಿದರು. ಸಮನ್ವಯ ಸಮಿತಿ ಅಧ್ಯಕ್ಷರಾದ ಮೇಲೆ ಇದೇ ಪ್ರಥಮ ಬಾರಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಚುನಾವಣೆಗೆ ಹೆಚ್ಚು ಕಾಲ ಉಳಿದಿಲ್ಲ. ತ್ವರಿತವಾಗಿ ಕಾರ್ಯೋನ್ಮುಖರಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನಿಸ್ವಾರ್ಥ ಸೇವೆಗೆ, ದೇಶಕ್ಕೆ ಹಾಗೂ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ ಎಂಬ ಸಂದೇಶವನ್ನು ಸಾರಬೇಕು. ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನು ಕೇಂದ್ರದ ಯುಪಿಎ ಸರ್ಕಾರ ಮಾಡಿದೆ. ದೇಶದ ಬೆನ್ನೆಲುಬಾದ ರೈತರ 60 ಸಾವಿರ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದೆ. ಈ ಬಗ್ಗೆ ದೇಶದ ಹಳ್ಳಿಹಳ್ಳಿಯಲ್ಲೂ ಜಾಗೃತಿ ಮೂಡಿಸಬೇಕು. ಮೂರುವರೆ ವರ್ಷಗಳ ನಂತರ ಕೆಪಿಸಿಸಿ ಕಚೇರಿಗೆ ಆಗಮಿಸುತ್ತಿದ್ದೇನೆ. ಹಳೆಯ ನೆನಪುಗಳು ಮರುಕಳಿಸುತ್ತಿವೆ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಕೃಷ್ಣ ಹೇಳಿದರು.

ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ಮಾತನಾಡಿ, ಯಾವುದೇ ಕಾರಣಕ್ಕೂ ಕೊಮುವಾದಿ ಪಕ್ಷ ಬಿಜೆಪಿಗೆ ಅಧಿಕಾರ ಕೊಡುವುದಿಲ್ಲ. ಕೋಮುವಾದಿಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕು ಎಂದರು. ದೇವೇಗೌಡರ ಪುತ್ರ ವ್ಯಾಮೋಹದಿಂದ ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆಯೂರುವಂತಾಯಿತು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದರು ಸಿದ್ಧು.

ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ,ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಕೇಂದ್ರ ಸಚಿವರಾದ ಎಂ.ವಿ.ರಾಜಶೇಖರನ್, ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X