ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೀವಾವಧಿ ಶಿಕ್ಷೆ ಅನುಭವಿಸಲು ಸಿದ್ಧ: ಆರ್.ಆರ್.ಪಾಟೀಲ್

By Staff
|
Google Oneindia Kannada News

Maharashtra DCM R R Patilಮುಂಬೈ, ಮಾ.24:ಕರ್ನಾಟಕದ ಗಡಿ ಜಿಲ್ಲೆಗಳಾದ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಪ್ರದೇಶಗಳಲ್ಲಿ ಶೋಷಣೆಗೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತ್ತಿರುವ ನಲವತ್ತು ಲಕ್ಷ ಮಾರಾಠಿ ಭಾಷಿಗರನ್ನು ರಕ್ಷಿಸಲು ಜೈಲಿಗೆ ಹೋಗಲು ಸಿದ್ಧ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಆರ್.ಆರ್.ಪಾಟೀಲ್ ಹೇಳಿದ್ದಾರೆ.

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪಾಟೀಲ್, ಕರ್ನಾಟಕದ ಗಡಿ ಭಾಗದ 856ಕ್ಕೂ ಅಧಿಕ ಹಳ್ಳಿಗಳ ನಲವತ್ತು ಲಕ್ಷ ಮರಾಠಿ ಭಾಷಿಗರು ಬಂಧೀಖಾನೆಯ ಖೈದಿಗಳ ತರಹ ಜೀವನ ಸಾಗಿಸುತ್ತಿದ್ದಾರೆ. ಅವರ ರಕ್ಷಣೆಗಾಗಿ ನನ್ನ ಉಳಿದ ಜೀವಮಾನವನ್ನು ಜೈಲಿನಲ್ಲಿ ಕಳೆಯುವುದಾಗಿ ಆರ್.ಆರ್.ಪಾಟೀಲ್ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ನಾಟಕದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಆರ್.ಆರ್.ಪಾಟೀಲರನ್ನು ಬಂಧಿಸಬೇಕೆಂದು ಕರವೇ ಹಾಗೂರಾಜ್ಯದ ಹಲವಾರು ರಾಜಕೀಯ ನಾಯಕರು ಆಗ್ರಹಿಸಿದ್ದರು. ಆರ್.ಆರ್.ಪಾಟೀಲ್ ಅವರ ಕರ್ನಾಟಕ ವಿರೋಧಿ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್‌ರಾವ್ ದೇಶಮುಖ್ ಬೆಂಬಲ ವ್ಯಕ್ತಸಿ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್‌ನಲ್ಲಿ ಹೋರಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಪರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್‌ರಾವ್ ದೇಶ್‌ಮುಖ್ ಬೆಂಬಲ ವ್ಯಕ್ತಪಡಿಸಿದ್ದರೆ, ಸರ್ವೋಚ್ಚ ನ್ಯಾಯಾಲಯದಲ್ಲಿ ಗಡಿ ಸಮಸ್ಯೆ ಬಗೆಹರಿಯುವ ತನಕ ವಿವಾದಾತ್ಮಕ ಗಡಿ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಗುರುತಿಸ ಬೇಕೆಂದು ಶಿವಸೇನೆ ಆಗ್ರಹಿಸಿದೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X