• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾರ್ಚ್ 29ರಂದು ಅಧಿಕೃತ ಮತದಾರರ ಪಟ್ಟಿ ಪ್ರಕಟ

By Staff
|

ಬೆಂಗಳೂರು, ಮಾ.27: ರಾಜ್ಯದಲ್ಲಿ ಪುನರ್ ವಿಂಗಡಣೆಯಾದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧಿಕೃತ ಮತದಾರರ ಪಟ್ಟಿ ಮಾರ್ಚ್ 29ರಂದು ಪ್ರಕಟವಾಗಲಿದೆ.

ಅಧಿಕೃತ ಪಟ್ಟಿ ಪ್ರಕಟವಾದ ನಂತರವೂ ಕೂಡ ಪಟ್ಟಿಯಲ್ಲಿ ಸೇರಿರಲಾರದ ಮತದಾರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಅಂದರೆ, ಅಭ್ಯರ್ಥಿಗಳು ನಾಮಿನೇಷನ್ ಸಲ್ಲಿಸುವವರೆಗೂ ಮತದಾರರು ತಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಲು ಅವಕಾಶವಿದೆ. ರಾಜ್ಯದಲ್ಲಿ ಎಲ್ಲೆಡೆ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೇಂದ್ರ ಚುನಾವಣಾ ಆಯೋಗ ಕೈಗೊಂಡಿದೆ.

ಚುನಾವಣಾ ದಿನಾಂಕ : ಮೇ 20ರೊಳಗೆ ಎರಡು ಹಂತದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು ಏಪ್ರಿಲ್ 5ರಂದು ಅಧಿಕೃತ ದಿನಾಂಕ ಪ್ರಕಟವಾಗುವ ನಿರೀಕ್ಷೆಯಿದೆ. ಮೇ 7ರಿಂದ 20ರೊಳಗೆ ಯಾವುದೇ ಎರಡು ದಿನದಂದು ಚುನಾವಣೆ ನಡೆಸುವ ಸಾಧ್ಯತೆಯಿದೆ.

ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಈಗಾಗಲೇ ಸೇರ್ಪಡೆಯಾಗಿದ್ದಲ್ಲಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಪುನರ್ ವಿಂಗಡಣೆಯಾದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮತ್ತೊಮ್ಮೆ ಹೆಸರು ಸೇರಿಸುವ ಅಗತ್ಯವಿಲ್ಲ. ಮತದಾರರ ಹೆಸರು ಪುನರ್ ವಿಂಗಡಣೆಯಾದ ವಿಧಾನಸಭಾ ಕ್ಷೇತ್ರಕ್ಕೆ ತಾನಾಗಿಯೇ ಸೇರ್ಪಡೆಯಾಗುತ್ತದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಸಮೀಪದ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ಕಚೇರಿಗಳನ್ನು ಸಂಪರ್ಕಿಸಬಹುದು.

ಮತದಾರರ ಪಟ್ಟಿಯಲ್ಲಿ ಭರ್ತಿಯಾಗುವ ಬಗೆ : ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದೇ ಹೋದಲ್ಲಿ ಅರ್ಜಿ ನಮೂನೆ-6ನ್ನು ಭರ್ತಿ ಮಾಡಿ ನಿಮ್ಮ ಹೆಸರನ್ನು ಸೇರಿಸಬಹುದು. ಭಾರತ ಚುನಾವಣಾ ಆಯೋಗದ ಅಂತರ್ಜಾಲದಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಕೆಳಕಂಡ ವಿಳಾಸದಲ್ಲಿ ಸಂಪರ್ಕಿಸಬಹುದು.

ಭಾರತ ಚುನಾವಣಾ ಆಯೋಗ,

ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ

ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560 001

(ದಟ್ಸ್‌ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more