ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಳಸಂತೆಯಲ್ಲಿ ಎಸ್ಸೆಸ್ಸೆಲ್ಸಿ ನಕಲಿ ಪ್ರಶ್ನೆ ಪತ್ರಿಕೆ ಮಾರಾಟ

By Staff
|
Google Oneindia Kannada News

ಬೆಂಗಳೂರು, ಮಾ.31: ಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆಯನ್ನು ಕಾಳಸಂತೆಯಲ್ಲಿ 2ರಿಂದ 3 ಸಾವಿರ ರೂ.ಗಳಿಗೆ ಮಾರಾಟ ಮಾಡಲಾಗಿದೆ. ಆದರೆ ಪರೀಕ್ಷೆ ಮುಗಿದ ನಂತರ ಅದು ನಕಲಿ ಪ್ರಶ್ನೆ ಪತ್ರಿಕೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡಲಾಗಿದೆ. ಇಂದು ವಿದ್ಯಾರ್ಥಿಗಳು ಕಠಿಣ ಎಂದು ಭಾವಿಸುವ ಗಣಿತ ವಿಷಯದ ಪರೀಕ್ಷೆ ನಡೆಯುತ್ತಿತ್ತು. ಇದರ ಲಾಭ ಪಡೆಯಲು ಕೆಲವು ದುಷ್ಕರ್ಮಿಗಳು ನಕಲಿ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡಿದ್ದಾರೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಠಿಣ ಕ್ರಮ ಕೈಗೊಂಡಿತ್ತು. ಆದರೂ ಹಲವು ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ಘಟನೆಗಳು ವರದಿಯಾಗಿವೆ. ರಾಯಚೂರಿನಲ್ಲಿ ವಿದ್ಯಾರ್ಥಿಯೊಬ್ಬನ ಬದಲಿಗೆ ಮತ್ತೊಬ್ಬ ಪರೀಕ್ಷೆ ಬರೆದು ಸಿಕ್ಕಿ ಬಿದ್ದಿದ್ದಾನೆ. ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಮಂಡಳಿಯ ಜಾಗೃತದಳ ಕಟ್ಟೆಚ್ಚರ ವಹಿಸಿದೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X