ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಸ್ಸೆಲ್ಸಿ : ಮೊದಲ ದಿನ 14 ವಿದ್ಯಾರ್ಥಿಗಳ ಡಿಬಾರ್

By Staff
|
Google Oneindia Kannada News

ಬೆಂಗಳೂರು, ಏ.01 : ಮಾರ್ಚ್ 31ರಿಂದ ಆರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಗಣಿತ ಪರೀಕ್ಷೆ ಬರೆಯುತ್ತಿದ್ದಾಗ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದ 14 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ವಿಜಾಪುರದಲ್ಲಿ ಐವರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಮೂವರು, ಕಲಬುರ್ಗಿ, ರಾಯಚೂರು ಮತ್ತು ಬೆಳಗಾವಿಯಲ್ಲಿ ಒಬ್ಬೊಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ನಕಲು ಮಾಡದಂತೆ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಮಂಡಳಿ ತೆಗೆದುಕೊಂಡಿದ್ದರೂ ಅನೇಕ ಕಡೆಗಳಲ್ಲಿ ಅವ್ಯವಹಾರ ನಡೆದಿದೆ. ಸೂಕ್ಷ್ಮ ಅನ್ನಿಸಿಕೊಂಡಿರುವ ಕೇಂದ್ರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಒಂದು ಬೆಂಚಿನಲ್ಲಿ ಇಬ್ಬರ ಬದಲಾಗಿ ಒಬ್ಬನನ್ನು ಕೂಡಿಸುವ ವ್ಯವಸ್ಥೆ ಕೂಡ ಮಾಡಲಾಗಿದೆ. ಕೆಲ ಕೇಂದ್ರಗಳಲ್ಲಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ. ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳನ್ನು ಕೇಂದ್ರ ತಂಡ ಸೀಲ್ ಮಾಡುವ ಪರಿಪಾಠವನ್ನೂ ಈ ಬಾರಿ ಅಳವಡಿಸಿಕೊಳ್ಳಲಾಗಿದೆ.

ಮೊದಲ ದಿನವೇ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಮಾರಿ ಕೆಲ ದುಷ್ಕರ್ಮಿಗಳು ಹಣ ಮಾಡಿಕೊಳ್ಳುತ್ತಿದ್ದಾರೆ ಎಂಬ ವದಂತಿಯನ್ನು ವಿದ್ಯಾರ್ಥಿಗಳು ನಂಬಬಾರದು ಎಂದು ಮಂಡಳಿ ಮನವಿ ಮಾಡಿಕೊಂಡಿದೆ. ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದರಿಂದ ಪ್ರಶ್ನೆ ಪತ್ರಿಕೆ ಹೊರಗಡೆ ಸಿಗುವ ಸಾಧ್ಯತೆಯೇ ಇಲ್ಲ ಎಂದು ಹೇಳಿದೆ. ನಕಲಿ ಪ್ರಶ್ನೆ ಪತ್ರಿಕೆ ಮಾರಾಟವಾಗುವ ವಿಷಯ ತಿಳಿದಲ್ಲಿ 080 23349434 ನಂಬರಿಗೆ ಸಾರ್ವಜನಿಕರು ದೂರು ನೀಡಬಹುದು.

ಎರಡನೇ ದಿನ, ಅಂದರೆ ಏಪ್ರಿಲ್ 1ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಯಿದೆ.

(ದಟ್ಸ್‌ಕನ್ನಡ ವಾರ್ತೆ)

2008ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ವೇಳಾಪಟ್ಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X