ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಬೆಂಕಿ ಮಹದೇವು

By Staff
|
Google Oneindia Kannada News

ಮೈಸೂರು, ಏ.2: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ಎಂ.ಮಹದೇವ್ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದರು. ಮುಂದಿನ ತಮ್ಮ ನಿರ್ಧಾರವನ್ನು ಎರಡು, ಮೂರು ದಿನಗಳಲ್ಲಿ ತಿಳಿಸುವುದಾಗಿ ಮಹದೇವು ಹೇಳಿದ್ದಾರೆ.

ಮಹದೇವು ಅವರ ಆಪ್ತ ಮೂಲಗಳ ಪ್ರಕಾರ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಇಂದು ಮಹದೇವು ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಸಿ.ರಮೇಶ್ ಸಹ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದರು. ಈ ರಾಜಕೀಯ ಬೆಳವಣಿಗೆಗಳ ನಡುವೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಹದೇವು ಅವರನ್ನು ಭೇಟಿಯಾಗಿ ಜೆಡಿ(ಎಸ್)ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ಆದರೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿನ ನಿಷ್ಠಾವಂತ ಕಾರ್ಯಕರ್ತರಿಗೆ ಮತ್ತ್ತು ನಾಯಕರಿಗೆ ಮಹತ್ವ ಕೊಡುತ್ತಿಲ್ಲ ಎಂದು ಪಕ್ಷ ತೊರೆಯುತ್ತಿರುವ ಕಾರಣವನ್ನು ಮಹದೇವು ಸುದ್ದಿಗಾರರಿಗೆ ತಿಳಿಸಿದರು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X