• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಯ್ದ ಮತದಾರರಿಗೆ ಕಲರ್ ಟಿವಿ: ಕಾಂಗ್ರೆಸ್

By Staff
|

Jaffer Sheriefಬೆಂಗಳೂರು,ಏ.9: ಮತದಾರರನ್ನು ಸೆಳೆಯಲು ವಿವಿಧ ರಾಜಕೀಯ ಪಕ್ಷಗಳು ಯತ್ನ ನಡೆಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಹಸಿರು ಪಡಿತರ ಚೀಟಿ ಹೊಂದಿರುವ ರಾಜ್ಯದ ಎಲ್ಲ ಮತದಾರರಿಗೆ ಕಲರ್ ಟಿವಿ,ಶೇ.3ರ ಬಡ್ಡಿ ದರದಲ್ಲಿ ಕೃಷಿ ಸಾಲ ಕೊಡುವ ಭರವಸೆಗಳ ಮಹಾಪೂರವನ್ನು ಹರಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಾಫರ್ ಷರೀಫ್, ಬಡ ಜನರ ಅಭ್ಯುದಯಕ್ಕಾಗಿ ಪಕ್ಷ ಈ ನಿರ್ಧಾರಕ್ಕೆ ಬಂದಿದೆ ಎಂದರು. ಪಕ್ಷದ ಪ್ರಣಾಳಿಕೆಯನ್ನು ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ ಷರೀಫ್, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದ್ದು, ಅದರಲ್ಲಿ ಪ್ರಮುಖವಾಗಿ 10ನೇ ತರಗತಿ ಪಾಸಾದ ಎಲ್ಲ ನಿರುದ್ಯೋಗಿ ಯುವಕರಿಗೆ ಮಾಸಿಕ 1200 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. ವಸತಿಹೀನರಿಗೆ ಐದು ವರ್ಷಗಳಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ನೇಕಾರರಿಗೆ ಆಶ್ರಯ ಮತ್ತು ಇಂದಿರಾ ಆವಾಸ್ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂಬ ಭರವಸೆಗಳನ್ನು ನೀಡಿದರು. ಹಸಿರು ಪಡಿತರ ಚೀಟಿ ಹೊಂದಿದವರಿಗೆ ಯಶಸ್ವಿನಿ ಯೋಜನೆಯನ್ನು ಮುಂದುವರೆಸುವ ಭರವಸೆಯನ್ನು ನೀಡಿದರು.

ಒಟ್ಟಾರೆಯಾಗಿ ವಿಧಾನಸಭೆ ಚುನಾವಣೆಯ ಈ ಸಂದರ್ಭದಲ್ಲಿ ವಿವಿಧ ಪಕ್ಷಗಳಿಂದ ಮತದಾರರನ್ನು ತಮ್ಮತ್ತ ಸೆಳೆಯಲು ಕ್ಯಾರೆಟ್ ಹಾಕುತ್ತಿವೆ. ತಮಿಳುನಾಡಿನಲ್ಲಿ ಕರುಣಾನಿಧಿ ಅವರ ಡಿಎಂಕೆ ಪಕ್ಷ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಸಂದರ್ಭದಲ್ಲಿ ಕಲರ್ ಟಿವಿ ಕೊಡುಗೆಯ ಭರವಸೆ ನೀಡಿ ಅಧಿಕಾರ ಗದ್ದುಗೆ ಏರಲು ಡಿಎಂಕೆ ಬಹುಮಟ್ಟಿಗೆ ಕಾರಣವಾಗಿತ್ತು. ಆ ಚುನಾವಣಾ ವರಸೆಯನ್ನೇ ಕನ್ನಡನಾಡಿನ ಕಾಂಗ್ರೆಸ್ಸು ಅನುಕರಿಸುತ್ತಿದೆ. ಬಡತನ ರೇಖೆಗಿಂತಲೂ ಕೆಳಗಿರುವವರ ಸಮಸ್ಯೆಗಳನ್ನು ಅರಿಯುವಲ್ಲಿ ಬೇರೆ ಪಕ್ಷಗಳಿಗಿಂತ ಕಾಂಗ್ರೆಸ್ ಮುಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸಚಿವ ಪೃಥ್ವಿರಾಜ್ ಚವ್ಹಾಣ್, ಹಿರಿಯ ನಾಯಕರಾದ ಎಸ್.ಎಂ.ಕೃಷ್ಣ, ಸಿದ್ಧರಾಮಯ್ಯ ಉಪಸ್ಥಿತರಿದ್ದರು. ಪಕ್ಷದ ಭರವಸೆಗಳನ್ನು ಈಡೇರಿಸಲು ಸಂಪತ್ತನ್ನು ವೃದ್ಧಿಸುವುದಾಗಿ ಕಾಂಗ್ರೆಸ್ ನಾಯಕರು ತಿಳಿಸಿದರು.

(ಯುಎನ್ಐ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more