ಉಗ್ರ ಸಬಾವುದ್ದೀನನಿಂದ ಮಹತ್ವದ ಮಾಹಿತಿ ಬಹಿರಂಗ

ಬೆಂಗಳೂರು,ಏ.10: ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಮೇಲೆ ನಡೆದ ಭಯೋತ್ಪಾದಕ ದಾಳಿಯ ರೂವಾರಿ ಸಬಾವುದ್ದೀನ್‌ನನ್ನು ಗುರುವಾರ ಸ್ಥಳೀಯ ಪೊಲೀಸ ರು ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಸಿದರು.

ಸಿಮಿ ಸಂಘಟನೆಯ ನಿಕಟವರ್ತಿ ಎಂದು ಬಿಂಬಿತನಾಗಿರುವ ಸಬಾವುದ್ದೀನ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, 2005 ರಲ್ಲಿ ಬೆಂಗಳೂರಿನ ಐಐಎಸ್‌ಸಿ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈ ಹಿನ್ನಲೆಯಲ್ಲಿ ಸ್ಥಳೀಯ ಪೋಲಿಸ್ ರು ತೀವ್ರ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದಿಂದ ಕರೆತಂದು ವಿಚಾರಣೆ ನಡೆಸಿದ್ದರಿಂದ ಉಗ್ರ ಸಬಾವುದ್ದೀನ್ ಸಿಮಿ ಸಂಘಟನೆ ಹಾಗೂ ಭಯೋತ್ಪಾದಕ ಕೃತ್ಯಗಳ ಬಗ್ಗೆ ಮಾಹಿತಿ ನೀಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಉಗ್ರ ಸಬಾವುದ್ದೀನನ್ನು ಕಳೆದ ಮಂಗಳವಾರ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಉಗ್ರರ ದಾಳಿ, ಗುರಿ ಮತ್ತು ಸಿಮಿ ಸಂಘಟನೆಯ ಕಾರ್ಯ ವೈಖರಿ ಮತ್ತು ಪಾಕ್ ಉಗ್ರರೊಂದಿಗಿನ ನಂಟು ಕುರಿತು ಮಹತ್ವದ ಸಂಗತಿಗಳನ್ನು ಬಹಿರಂಗಗೊಳಿಸಿದ್ದಾನೆ ಎನ್ನಲಾಗಿದೆ. ಏ.14 ರಂದು ಸಬಾವುದ್ದೀನನ್ನು ಉತ್ತರಪ್ರದೇಶಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+