ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ಕಾರ್ಯಕರ್ತರಿಗೆ ಓಟಿನ ಹಕ್ಕಿಲ್ಲವೆ?

By Staff
|
Google Oneindia Kannada News

ಬೆಂಗಳೂರು, ಏ.17: ಲೈಂಗಿಕ ಕಾರ್ಯಕರ್ತರಿಗೆ ಓಟಿನ ಹಕ್ಕು ಇಲ್ಲವೆ? ಸಂವಿಧಾನಬದ್ಧವಾದ ನಮ್ಮ ಓಟಿನ ಹಕ್ಕನ್ನು ಕಿತ್ತುಕೊಳ್ಳಲಾಗಿದೆ. ಅಲ್ಪಸಂಖ್ಯಾತರಾಗಿರುವ ನಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲು ಅಧಿಕಾರಿಗಳು ಒಲ್ಲೆ ಎನ್ನುತ್ತಿದ್ದಾರೆ ಎಂದು ಲೈಂಗಿಕ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಕಳೆದ 20 ವರ್ಷಗಳಿಂದ ಬೆಂಗಳೂರಿನ ಆರ್‌ಪಿಸಿ ಬಡಾವಣೆಯಲ್ಲಿ ಸಹನಾ ಎಂಬ ಲೈಂಗಿಕ ಕಾರ್ಯಕರ್ತೆವಾಸವಾಗಿದ್ದಾರೆ. ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಅರ್ಜಿ ಹಿಡಿದು ಸಾಕಷ್ಟು ಬಾರಿ ಕಚೇರಿಗೆ ಅಲೆದಿದ್ದಾರೆ. ಆದರೆ ಚುನಾವಣೆ ಅಧಿಕಾರಿಗಳು ಆಕೆಯ ಅರ್ಜಿಯನ್ನು ಸ್ವೀಕರಿಸುತ್ತಿಲ್ಲ. ವಿಳಾಸದ ದಾಖಲೆ ಪತ್ರ ಇಲ್ಲದ ಕಾರಣ, ಅರ್ಜಿಯನ್ನು ತಿರಸ್ಕರಿಸುತ್ತಿದ್ದಾರೆ. ಲೈಂಗಿಕ ಕಾರ್ಯಕರ್ತರು ಎನ್ನುವ ಒಂದೇ ಒಂದು ಕಾರಣಕ್ಕೆ ತಮ್ಮ ಹಕ್ಕುಗಳನ್ನು ಕಡೆಗಣಿಸಲಾಗುತ್ತಿದೆ. ನಮಗೆ ನ್ಯಾಯ ಕೊಡಿಸಿ ಎಂದು ಕರ್ನಾಟಕ ಲೈಂಗಿಕ ಕಾರ್ಯಕರ್ತರ ಸಂಘ ಸೇರಿದಂತೆ ಸಮರ, ಸಂಗಮ ಮತ್ತು ಸುರಕ್ಷ ಸಂಘಟನೆಗಳು ಆಗ್ರಹಿಸಿವೆ. ಚುನಾವಣೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿವೆ.

ನೆಲಮಂಗಲ, ರಾಮನಗರ, ದೊಡ್ಡಬಳ್ಳಾಪುರ ನಗರಗಳು ಸೇರಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಷೇತ್ರಗಳಲ್ಲಿ ಲೈಂಗಿಕ ಕಾರ್ಯಕರ್ತರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲು ತಿರಸ್ಕರಿಸುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತಿರುವುದಾಗಿ ಸಂಘದ ಕಾರ್ಯದರ್ಶಿ ಗೀತಾ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X