ಕುರುಬಗಟ್ಟಿಯಲ್ಲಿ ಕಲ್ಲು ತೂರಾಟ; 21 ಬಂಧನ
ಧಾರವಾಡ,ಏ.25: ಇಲ್ಲಿನ ಕುರುಬಗಟ್ಟಿ ಗ್ರಾಮದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಪ್ರಾರ್ಥನಾ ಸ್ಥಳದ ಮೇಲೆ ಸಗಣಿ ಮತ್ತು ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಘಟನೆಗೆ ಸಂಬಂಧಿಸಿದಂತೆ 21 ಆರೋಪಿಗಳನ್ನು ಪೊಲೀಸರು ವಶಕ್ಕೆ ತಗೆದುಕೊಂಡಿದ್ದಾರೆ.
ಚುನಾವಣೆ ಪ್ರಯುಕ್ತ ನಿನ್ನೆ ರಾತ್ರಿ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಕುರುಬಗಟ್ಟಿಯಲ್ಲಿ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ಕಾರ್ಯಕರ್ತರು ಅಲ್ಲಿದ್ದ ಪ್ರಾರ್ಥನಾ ಸ್ಥಳಕ್ಕೆ ಸಗಣಿ ಮತ್ತು ಕಲ್ಲು ತೂರಾಟ ನಡೆಸಿರುವ ಹಿನ್ನಲೆಯಲ್ಲಿ ಕೆಲಕಾಲ ಅಶಾಂತಿಯ ವಾತಾವರಣಉಂಟಾಗಿತ್ತು.
ಘಟನೆ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖಂಡ ಗಂಗಾಧರ್ ಕುಲಕರ್ಣಿ ಸೇರಿದಂತೆ 21 ಮಂದಿಯನ್ನು ಪೊಲೀಸರು ವಶಕ್ಕೆ ತಗೆದುಕೊಂಡಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಮುಸಂಘರ್ಷ ಉಂಟು ಮಾಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿರುವ ಪೊಲೀಸರು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ, ತನಿಖೆ ನಂತರ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
