• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟ : ಅಡ್ವಾಣಿ ಭವಿಷ್ಯ

By Staff
|

L.K. Advaniಬೆಂಗಳೂರು,ಮೇ.03: ನಾಯಕನಿಲ್ಲದೇ ಚುನಾವಣೆ ಎದುರಿಸುತ್ತಿರುವ ಕಾಂಗ್ರೆಸ್ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಧೂಳಿಪಟವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ಆನೇಕಲ್‌ನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವನ್ನು ಅಡ್ವಾಣಿ ಉದ್ಘಾಟಿಸಿದ ನಂತರ ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ನಾಯಕನಿಲ್ಲದಿರುವುದು ದುರಂತ ಎಂದಿರುವುದು ಅವರು, ಪಂದ್ಯ ಮುಗಿದ ಮೇಲೆ ನಾಯಕನನ್ನು ಆರಿಸುವುದು ಆಟಗಾರನ ಲಕ್ಷಣವಲ್ಲ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕನ ಕುರಿತು ಭಾರಿ ಗೊಂದಲವಿದ್ದು, ಕಚ್ಚಾಟದಲ್ಲಿ ತೊಡಗಿದ್ದಾರೆ, ಇಂಥವರಿಂದ ಅಭಿವೃದ್ಧಿ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದು ಅಡ್ವಾಣಿ ಹೇಳಿದರು.

ಯಡಿಯೂರಪ್ಪ ರಾಜ್ಯ ಬಿಜೆಪಿಯಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದು, ಈಗಾಗಲೇ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಅಧಿಕಾರ ಕೊಟ್ಟಲ್ಲಿ ಭಾರತೀಯ ಜನತಾ ಪಕ್ಷದಿಂದ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸಂಶಯವಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಕಳೆದ ಬಾರಿ ಚುನವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಅದರೆ ಅಧಿಕಾರಕ್ಕೆ ಬೇಕಾಗಿರುವ ಸಂಖ್ಯೆಯನ್ನು ಜನತೆ ನೀಡಿರಲಿಲ್ಲ, ಆದರಿಂದ ರಾಜ್ಯದ ಜನತೆ ಅನೇಕ ಕಷ್ಟನಷ್ಟಗಳನ್ನು ಎದುರಿಸಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಈ ಸಲ ಅಂತಹ ತಪ್ಪನ್ನು ಮಾಡದೆ, ಬಿಜೆಪಿ ಅಧಿಕಾರ ನೀಡಿದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ರೂಪಿಸುತ್ತೇವೆ ಎಂದು ಅಡ್ವಾಣಿ ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more