ಮತದಾನಕ್ಕೆ ಬಿಗಿ ಭದ್ರತೆ ಒದಗಿಸಲು ಪೊಲೀಸ್ ಸನ್ನದ್ಧ

ಬೆಂಗಳೂರು,ಮೇ.2: ರಾಜ್ಯದಲ್ಲಿ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ಪೊಲೀಸ್ ಇಲಾಖೆಯ ಭದ್ರತಾ ಕಾರ್ಯ ಭರದಿಂದ ಸಾಗಿದೆ. ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಚುನಾವಣೆ ನಡೆಸಲು ಹರಸಾಹಸ ನಡೆಸುತ್ತಿರುವ ಪೊಲೀಸ್ ಇಲಾಖೆ ಅನೇಕ ಕಾರ್ಯತಂತ್ರಗಳನ್ನು ರೂಪಿಸಿದೆ.

ಮೇ 10ರಂದು ಮೊದಲ ಹಂತದ ಚುನಾವಣೆ ನಡೆಯುವ 11 ಜಿಲ್ಲೆಗಳ ಒಟ್ಟು 12,372 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಿ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸ್ ಇಲಾಖೆ ತಯಾರಿ ನಡೆಸಿದೆ. ಒಟ್ಟು 16,496 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಶೇ. 75 ರಷ್ಟು ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಇಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಮೇ. 4 ರೊಳಗೆ ಅರೆಸೇನಾಪಡೆಯ 225 ತುಕುಡಿಗಳು ರಾಜ್ಯಕ್ಕೆ ಆಗಮಿಸಲಿವೆ. ಮೂರನೇ ಹಂತದ ಮತದಾನಕ್ಕೆ 200 ಅರೆಸೇನಾ ಪಡೆ ತುಕಡಿಗಳನ್ನು ಬಳಸಿಕೊಳ್ಳಲು ಇಲಾಖೆ ನಿರ್ಧರಿಸಿದೆ. ಶಾಂತಿಯುತ ಮತದಾನಕ್ಕೆ ಇಲಾಖೆ ಸರ್ವ ಸನ್ನದ್ಧವಾಗಿದೆ. ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಿಗೆ ವಿಶೇಷ ಭದ್ರತೆ ಒದಗಿಸಲು ಚಿಂತನೆ ನಡೆಸಿರುವ ಇಲಾಖೆ, ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+