• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೈಪುರ ಸ್ಫೋಟ; ಎಂಟು ಮಂದಿ ಬಂಧನ

By Staff
|

ಜೈಪುರ, ಮೇ 14: ಜೈಪುರ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬಾಂಗ್ಲಾದೇಶ ಮೂಲದ ಹರ್ಕತ್ ಉಲ್ ಜಿಹಾದಿ ಇಸ್ಲಾಮಿಯ (ಹೂಜಿ) ಉಗ್ರವಾದಿ ಸಂಘಟನೆಯ ಕೈವಾಡವಿದೆ ಎಂದು ತನಿಖೆಯಿಂದ ದೃಢಪಟ್ಟಿದೆ.

ವಿಚಾರಣೆಗೆ ಒಳಪಡಿಸಿರುವ ಎಂಟು ಮಂದಿಯಲ್ಲಿ ಒಬ್ಬ ಬಾಂಬ್ ಸ್ಪೋಟದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 9ಗಂಟೆಯಿಂದ ಜೈಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 15 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಇಂದು ಸಂಜೆ 6ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಸ್ಫೋಟದ ಸ್ಥಳದಲ್ಲಿ ನಮಗೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭಿಸಿವೆ. ಇವನ್ನು ತಾಂತ್ರಿಕ ನಿಪುಣರು ವಿಶ್ಲೇಷಿಸುತ್ತಿದ್ದಾರೆ ಎಂದು ಜೈಪುರದ ಪೊಲೀಸ್ ಸೂಪರಿಂಟೆಂಡೆಂಟ್ ರಾಘವೇಂದ್ರ ಸುಹಾಸ್ ತಿಳಿಸಿದರು.

ಸ್ಫೋಟಕ್ಕೆ ಅಮೋನಿಯಂ ನೈಟ್ರೇಟನ್ನು ಬಳಸಿರುವುದಾಗಿ ಪ್ರಾಥಮಿಕ ಪರೀಕ್ಷೆಯಿಂದ ಋಜುವಾಗಿದೆ. ಇದಕ್ಕಾಗಿ ಹೊಸ ಸೈಕಲ್‌ಗಳನ್ನು ಬಳಸಿಕೊಳ್ಳಲಾಗಿದೆ. ಸ್ಫೋಟಕ್ಕೆ ಕಾರಣವಾಗಿರುವ ಹೂಜಿ ಸಂಘಟನೆ ಮುಖ್ಯವಾಗಿ ಬಾಂಗ್ಲಾದೇಶದಲ್ಲಿ ಅಸ್ತಿತ್ವದಲ್ಲಿದೆ. ಸರಣಿ ಬಾಂಬ್‌ಗಳನ್ನು ಸ್ಫೋಟಿಸಿ ರಾಜಸ್ಥಾನದ ಆರ್ಥಿಕ ಶಕ್ತಿಯಂತಿರುವ ಪ್ರವಾಸೋದ್ಯಮ ಚಟುವಟಿಕೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಹೂಜಿ ಈ ದುಷ್ಕೃತ್ಯಕ್ಕೆ ಕೈಹಾಕಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಘಟನೆ ವಿವರ:

ಮಂಗಳವಾರ ಸಂಜೆ 7.30ರಿಂದ 7.45ರ ಸಮಯದಲ್ಲಿ ಜೈಪುರದ ತ್ರಿಪೋಲಿಯಾ ಬಜಾರ್, ಹವಾ ಮಹಲ್, ಜೋಹರಿ ಬಜಾರ್, ಮಾನಸ್ ಚೌಕ್, ಬಡಿ ಚೌಪಾಲ್ ಮತ್ತು ಚೋಟಿ ಚೌಪಾಲ್, ಕೋತ್ವಾಲಿ ಪ್ರದೇಶಗಳಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ 60ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡು 200ಕ್ಕೂ ಹೆಚ್ಚು ಮಂದಿಯನ್ನು ಗಾಯಗೊಳಿಸಿತ್ತು. ತ್ರಿಪೋಲಿಯಾ ಬಜಾರ್‌ನಲ್ಲಿ ಬಾಂಬ್ ಸ್ಫೋಟಿಸಿದಾಗ ಸಾವಿರಾರು ಜನ ಅಲ್ಲೇ ಸಮೀಪದಲ್ಲಿದ್ದ ಹನುಮಾನ್ ಗುಡಿಗೆ ದೇವರ ದರ್ಶನಕ್ಕಾಗಿಬಂದಿದ್ದರು. ಉಗ್ರರು ಬಾಂಬ್ ಸ್ಫೋಟಕ್ಕೆ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಮೀಪವಿರುವ ಸ್ಥಳಗಳನ್ನೇ ಆಯ್ಕೆ ಮಾಡಿಕೊಂಡಿರುವುದು ಗಮನಾರ್ಹ.

ಸರಣಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಸೈಕಲ್‌ನ ಹ್ಯಾಂಡಲ್‌ನ ಬಳಿ ಇಟ್ಟಿದ್ದ ಬಾಂಬ್‌ ಒಂದು ಸ್ಫೋಟಗೊಳ್ಳದೆ ಇನ್ನೂ ಜೀವಂತವಾಗಿತ್ತು. ಇದನ್ನು ಗಮನಿಸಿದ ಪೊಲೀಸರು ತಕ್ಷಣ ಅದನ್ನು ನಿಷ್ಕ್ರಿಯಗೊಳಿಸಿದರು. ಟೈಮರ್‌ಗಳನ್ನು ಅಳವಡಿಸಿ ಬಾಂಬ್‌ಗಳನ್ನು ಸ್ಫೋಟಿಸಿರುವುದಾಗಿ ಪೊಲೀಸರು ತಿಳಿಸಿದರು. ಇದಕ್ಕಾಗಿ ಮಂಗಳವಾರ ತೀವ್ರ ಜನಸಂದಣಿ ಇರುವ ನಗರದ ಎರಡು ಹನುಮಾನ್ ಮಂದಿರಗಳನ್ನು ಆರಿಸಿಕೊಂಡಿರುವುದಾಗಿ ಅವರು ತಿಳಿಸಿದರು.

(ಏಜೆನ್ಸೀಸ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more