ಎರಡನೇ ಹಂತದ ಮತದಾನ: ಉತ್ತಮ ಪ್ರತಿಕ್ರಿಯೆ

ಬೆಂಗಳೂರು, ಮೇ 16: ತೀವ್ರ ಕುತೂಹಲ ಕೆರಳಿಸಿರುವ ಎರಡನೇ ಹಂತದ ಮತದಾನಕ್ಕೆ ಶುಕ್ರವಾರ ಬೆಳಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳ ಒಟ್ಟು 10 ಜಿಲ್ಲೆಗಳ 66 ಕ್ಷೇತ್ರಗಳಲ್ಲಿ ಮತದಾನ ಚುರುಕಾಗಿ ಸಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಿ.ವಿ.ಸದಾನಂದಗೌಡ , ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಸ್.ಬಂಗಾರಪ್ಪ, ಮಧು ಬಂಗಾರಪ್ಪ, ಕಾಂಗ್ರೆಸ್ ಮುಖಂಡ ಆಸ್ಕರ್ ಪರ್ನಾಂಡಿಸ್, ಮಾಜಿ ಸಚಿವರಾದ ಡಿ.ಎಚ್.ಶಂಕರಮೊರ್ತಿ, ಶ್ರೀರಾಮುಲು, ಡಿ.ಬಿ.ಚಂದ್ರೇಗೌಡ,ಆರ್.ವಿ.ದೇಶಪಾಂಡೆ, ಮಾಜಿ ಶಾಸಕ ಸಿ.ಟಿ.ರವಿ, ಉಡುಪಿಯ ಪೇಜಾವರ ಸ್ವಾಮೀಜಿಗಳು ಮತ್ತು ಚಿತ್ರದುರ್ಗದ ಮುರುಘರಾಜೇಂದ್ರ ಸ್ವಾಮೀಜಿಗಳು ಇಂದು ಬೆಳಗ್ಗೆ ತಮ್ಮ ಹಕ್ಕನ್ನು ಚಲಾಯಿಸಿದರು. ರಾಜ್ಯಾದ್ಯಂತ ಶೇ. 10 ರಷ್ಟು ಮತದಾನ ಆಗಿರುವ ವರದಿಯಾಗಿದೆ.

66 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಂ.ಪಿ. ಪ್ರಕಾಶ್, ಕಾಗೋಡು ತಿಮ್ಮಪ್ಪ, ಜಯಪ್ರಕಾಶ್ ಹೆಗಡೆ ಮತ್ತು ಮಹಿಮಾ ಪಟೇಲ್, ಕರುಣಾಕರ ರೆಡ್ಡಿ, ಕೆ.ಎಸ್.ಈಶ್ವರಪ್ಪ, ಶಾಮನೂರು ಶಿವಶಂಕರಪ್ಪ ಹಾಗೂ ಡಿ.ಬಿ.ಚಂದ್ರೇಗೌಡ ಸೇರಿದಂತೆ ಅನೇಕ ರಾಜಕಾರಣಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ. ಎರಡನೇ ಹಂತದ ಚುನಾವಣೆಯಲ್ಲಿ 590 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 1.10 ಕೋಟಿ ಮತದಾರರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+