3ನೇ ಹಂತಕ್ಕೆ ಅಂತ್ಯವಾದ ಪ್ರಚಾರದ ಭರಾಟೆ

ಬೆಂಗಳೂರು,ಮೇ 20: ಅಂತಿಮ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಗೊಂಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಗುಲ್ಬರ್ಗಾ, ಬೀದರ್, ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 69 ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದೆ.

ಎಂಟು ಸಲ ಶಾಸಕರಾಗಿರುವ ಮಾಜಿಮುಖ್ಯಮಂತ್ರಿ ಎನ್.ಧರ್ಮಸಿಂಗ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ಶಶಿಕಾಂತ ನಾಯಿಕ, ಬಂಡೆಪ್ಪ ಕಾಶೆಂಪೂರ, ಗುರುಪಾದಪ್ಪ ನಾಗಮಾರಪಲ್ಲಿ, ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್, ಸಿ.ಎಂ.ಉದಾಸಿ, ಎಸ್.ಎಸ್,ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ, ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್, ರೇವು ನಾಯಕ ಬೆಳಮಗಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅನೇಕ ರಾಜಕಾರಣಿಗಳ ಭವಿಷ್ಯ ನಿರ್ಧಾರವಾಗಲಿದೆ. ಮೇ 22 ರಂದು ನಡೆಯಲಿರುವ ಅಂತಿಮ ಹಂತದ ಮತದಾನದ 69 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 13528 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. 1,17,62,784 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

ಸಂಖ್ಯಾ ಬಲದ ದೃಷ್ಟಿಯಿಂದ ಅಂತಿಮ ಹಂತದ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಅತೀ ಮಹತ್ವ ಏನಿಸಿದ್ದರಿಂದ ಶತಾಯಗತಾಯ ಅಧಿಕಾರಕ್ಕೆ ಬರಲೇಬೇಕು ಎಂಬ ಉದ್ದೇಶದ ಹಿನ್ನಲೆಯಲ್ಲಿ ಉಭಯ ಪಕ್ಷಗಳ ಹಿರಿಯ ನಾಯಕರು ಭಾರಿ ಪ್ರಚಾರವನ್ನು ಕೈಗೊಂಡಿದ್ದರು. ಮುಖ್ಯವಾಗಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಸುಷ್ಮಾ ಸ್ವರಾಜ್, ಉತ್ತರಪ್ರದೇಶ ಮುಖ್ಯಮಂತ್ರಿ ಮಾಯಾವತಿ, ಕಾಂಗ್ರೆಸ್ ಪಕ್ಷ ನಾಯಕಿ ಸೋನಿಯಾ ಗಾಂಧಿ, ಕೇಂದ್ರ ಸಚಿವರಾದ ಲಾಲು ಪ್ರಸಾದ ಯಾದವ್, ಶಿವರಾಜ್ ಪಾಟೀಲ್, ಕಪಿಲ್ ಸಿಬಲ್, ರಾಹುಲ್ ಗಾಂಧಿ ಹೀಗೆ ಅನೇಕ ನಾಯಕರು ಕಸರತ್ತು ನಡೆಸಿದ್ದಾರೆ.

ಬಹಿರಂಗ ಪ್ರಚಾರ ಕೊನೆಗೊಂಡಿರುವ ಹಿನ್ನಲೆಯಲ್ಲಿ ಅಂತಿಮ ಸುತ್ತಿನ ಪ್ರಚಾರದ ಅಬ್ಬರದಲ್ಲಿರುವ ಘಟಾನುಘಟಿ ರಾಜಕಾರಣಿಗಳು ಇಂದು ಕ್ಷೇತ್ರ ಬಿಟ್ಟು ತೆರಳಬೇಕು. ಇಲ್ಲದಿದ್ದರೆ ಆಯೋಗದ ಕೆಂಗೆಣ್ಣಿಗೆ ತುತ್ತಾಗಬೇಕಾಗುತ್ತದೆ. ಕಣದಲ್ಲಿರುವ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚಿಸಲು ಆರಂಭಿಸಿದ್ದಾರೆ.

ಮಂಗಳವಾರ ಸಂಜೆ 5 ಗಂಟೆಯಿಂದ ಗುರುವಾರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ಸ್ಥಗಿತಗೊಳಿಸಲಾಗಿದೆ. ನೆರೆ ರಾಜ್ಯಗಳಿಂದ ಅಕ್ರಮವಾಗಿ ನುಸುಳುವುದನ್ನು ತಡೆಯಲು ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಣ, ಮದ್ಯ ಮತ್ತು ಇತರೆ ನಕಲಿ ಆಮಿಷಗಳನ್ನು ತಡೆಯಲು ಚುನಾವಣಾಧಿಕಾರಿಗಳಿಗೆ ಮತ್ತು ವೀಕ್ಷಕರಿಗೆ ಆಯೋಗ ಸ್ಪಷ್ಟ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಕಳ್ಳಭಟ್ಟಿ ದುರಂತ ನಡೆದಿರುವುದರಿಂದ ಪೊಲೀಸ್ ಮತ್ತು ಅಬಕಾರಿ ಇಲಾಖೆ ಭಾರಿ ಕಟ್ಟೆಚ್ಚರ ವಹಿಸಿವೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಮತ್ತು ವಿಡಿಯೋ ಚಿತ್ರೀಕರಣವನ್ನು ಅಳವಡಿಸಲಾಗಿದೆ. 58 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರೇಮಂಡ್ ಪೀಟರ್ ನೇತೃತ್ವದ ತಂಡ ಮತದಾನಕ್ಕೆ ವೇದಿಕೆಯನ್ನು ಸಿದ್ಧಗೊಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+