• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿ ಸರ್ಕಾರಕ್ಕೆ ಅಲ್ಪಾವಧಿ : ಕೋಡಿಮಠಶ್ರೀ ಭವಿಷ್ಯ

By Staff
|

ಬೆಂಗಳೂರು, ಮೇ 24: ಭಾರತೀಯ ಜನತಾ ಪಕ್ಷ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಆದರೆ, ಸರ್ಕಾರದ ಆಯುಷ್ಯ ಕೇವಲ ಆರು ತಿಂಗಳು ಮಾತ್ರ. ನವೆಂಬರ್ ತಿಂಗಳಲ್ಲಿ ರಾಜ್ಯ ಇನ್ನೊಂದು ವಿಧಾನಸಭೆ ಚುನಾವಣೆಯನ್ನು ಎದುರಿಸಲಿದೆ ಎಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠ ಪೀಠಾಧಿಪತಿಗಳಾದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇಲ್ಲಿಯವರೆಗೂ ಹೇಳಿರುವ ಭವಿಷ್ಯ ನಿಜವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ 120ರ ಆಸುಪಾಸಿನಲ್ಲಿ ಸೀಟುಗಳನ್ನು ಪಡೆದುಕೊಳ್ಳಲಿದ್ದು, ಸಂವಿಧಾನಾತ್ಮಕವಾಗಿ ಸರ್ಕಾರ ರಚನೆ ಮಾಡುತ್ತದೆ. ಆದರೆ ಸರ್ಕಾರ ಅತೀ ಕಡಿಮೆ ಅವಧಿಯಲ್ಲಿ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

ಚುನಾವಣೆ ನಡೆಸಲು ಮೇ ತಿಂಗಳ ಸೂಕ್ತವಾಗಿರಲಿಲ್ಲ. ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಗಮನಾರ್ಹ ಬದಲಾವಣೆಯಾಗುವ ಸಾಧ್ಯತೆಗಳಿವೆ. ಮತ್ತೊಮ್ಮೆ ಚುನಾವಣೆ ಎದುರಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ಸ್ವಾಮೀಜಿಗಳು ನುಡಿದಿದ್ದಾರೆ.

ಕುಮಾರಸ್ವಾಮಿ ಪ್ರಧಾನಿ? : ಕಳೆದ 2004ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಅವರು ಭವಿಷ್ಯ ನುಡಿದಿದ್ದರು. ಅದರಂತೆ ಈ ಹಿಂದೆ ಎರಡು ಸಮ್ಮಿಶ್ರ ಸರ್ಕಾರಗಳು ರಾಜ್ಯವನ್ನು ಆಳಿದವು. ಕೋಡಿಮಠ ಮಠದ ಸ್ವಾಮೀಜಿಗಳು ಹೇಳಿರುವ ಇನ್ನೊಂದು ಮಹತ್ವದ ಸಂಗತಿ ಎಂದರೆ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ 60ನೇ ವಯಸ್ಸಿನಲ್ಲಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಹೇಳಿರುವುದು ಬಾರೀ ಕುತೂಹಲಕ್ಕೆ ಕಾರಣವಾಗಿದೆ.

ದೇಶದಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಯೊಬ್ಬರು ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಪೀಠವನ್ನು ಅಲಂಕರಿಸಲಿದ್ದಾರೆ ಎಂದು ರಾಷ್ಟ್ರಪತಿ ಚುನಾವಣೆ ಮೊದಲು ಹೇಳಿದ್ದರು. ಪ್ರತಿಭಾ ಪಾಟೀಲ್ ರಾಷ್ಟ್ರಪತಿಯಾದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಕುರಿತು ಹೇಳಿದ್ದ ಎಲ್ಲ ಭವಿಷ್ಯದಲ್ಲಿ ಎಲ್ಲವೂ ನಿಜವಾಗಿವೆ. ಹಾಗೆಯೇ ನಮ್ಮ ಪಕ್ಕ ದೇಶದಲ್ಲಿ ಮಹಿಳಾ ನಾಯಕಿಯೂಬ್ಬರ ಕೊಲೆಯಾಗಲಿದೆ ಎಂದಿದ್ದರು. ಕಡಿಮೆ ಅವಧಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಬೆನಜೀರ್ ಭುಟ್ಟೋ ಅವರನ್ನು ಹತ್ಯೆ ಮಾಡಲಾಯಿತು.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more