ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ ಸಮಯ ಬದಲಾಗಿದೆ ಮೇ 30 ರಿಂದ ಬನ್ನಿ

By Staff
|
Google Oneindia Kannada News

ಬೆಂಗಳೂರು, ಮೇ 28: ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷ ಇದೇ 30 ರಿಂದ ಆರಂಭವಾಗಲಿದೆ. ಬೆಂಗಳೂರು ಶಾಲೆಗಳ ಸಮಯ ಬದಲಾಗಿದ್ದು, ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳು ಬೆಳಗ್ಗೆ 8.30 ರಿಂದ ಮಧ್ಯಾಹ್ನ 2.30 ಗಂಟೆ ಹಾಗೂ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕಾರ್ಯನಿರ್ವಹಿಸಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಇಲಾಖೆ ಆಯುಕ್ತ ಜಿ.ಕುಮಾರನಾಯಕ, ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮೂದಲ ದಿನವೇ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು. ಅಲ್ಲದೇ ಮೂದಲ ದಿನದಿಂದಲೇ ಎಲ್ಲ ಶಾಲೆಗಳಲ್ಲಿಯೂ ಬಿಸಿಯೂಟ ಕಾರ್ಯಕ್ರಮ ಆರಂಭಯಾಗಲಿದೆ. ಈ ವರ್ಷ ಸಿಹಿಯೂಟದ ಮೂಲಕ ಬಿಸಿಯೂಟವನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಶಾಲೆ ಆರಂಭಕ್ಕೆ ಮುನ್ನ ಶಾಲೆ ಆವರಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆದೇಶಿಸಲಾಗಿದೆ. ಮೊದಲ ದಿನದಿಂದಲೇ ಶೇ. 100 ರಷ್ಟು ಹಾಜರಾತಿ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟಾರೆ 68,276 ಶಾಲೆಗಳಿದ್ದು, 95 ಲಕ್ಷ ವಿದ್ಯಾರ್ಥಿಗಳು ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವರ್ಷ ಒಂದನೇ ತರಗತಿಗೆ 10 ರಿಂದ 11 ಲಕ್ಷ ವಿದ್ಯಾರ್ಥಿಗಳು ದಾಖಲಾಗುವ ಸಾಧ್ಯತೆಗಳಿವೆ ಎಂದು ಕುಮಾರನಾಯಕ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X