ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಮಾಣ ವಚನಕ್ಕೆ ಸಿಂಗಾರಗೊಂಡಿರುವ ವಿಧಾನಸೌಧ

By Staff
|
Google Oneindia Kannada News

ಬೆಂಗಳೂರು, ಮೇ 29 : ಶುಕ್ರವಾರ ಮೇ 30ರಂದು 25ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಆರು ತಿಂಗಳಿಂದ ಕಳೆಕಳೆದುಕೊಂಡಿದ್ದ ವಿಧಾನಸೌಧ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ.

ಥಳಥಳನೆ ತೊಳೆದು ಫಳಫಳನೆ ಹೊಳೆಯುತ್ತಿರುವ ಜನಪ್ರತಿನಿಧಿಗಳ ಆಡಳಿತ ಕಚೇರಿಯ ಮೆಟ್ಟಿಲುಗಳು ಯಡಿಯೂರಪ್ಪ ಮತ್ತು ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿರುವ 20 ಶಾಸಕರನ್ನು ಸ್ವಾಗತಿಸಲು ಅಣಿಯಾಗಿವೆ. ಮೆಟ್ಟಿಲುಗಳ ಮೇಲೆ ಭವ್ಯವಾದ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗಿದ್ದು, ಗಣ್ಯರಿಗೆ ವಿಶೇಷ ಅಸನದ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ಎರಡು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.

ದಕ್ಷಿಣದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಅಧಿಕಾರ ಗದ್ದುಗೆ ಏರಲಿರುವ ಗಳಿಗೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರ ದಂಡೇ ನಾಳೆ ನಗರಕ್ಕೆ ಆಗಮಿಸಲಿದೆ. ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಬಿಜೆಪಿ ಗೆಲುವಿನ ರೂವಾರಿ ಅರುಣ್ ಜೈಟ್ಲೀ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು ಉಪಸ್ಥಿತರಿರುವರು. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಅವರು ಶುಕ್ರವಾರ ಮಧ್ಯಾಹ್ನ ಸರಿಯಾಗಿ 1.50ಕ್ಕೆ ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಾರಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು ಎರಡು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆ ದೃಷ್ಟಿಯಿಂದ ನಾಳೆಯ ಮಟ್ಟಿಗೆ ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಅಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದುಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X