ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಲಿಕಾನ್ ಸಿಟಿಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವರು

By Staff
|
Google Oneindia Kannada News

ಬೆಂಗಳೂರು, ಜೂ.2 : ಮಳೆಗಾಲದ ಸಂದರ್ಭದಲ್ಲಿ ನಗರದಲ್ಲಿ ಯಾವುದೇ ರೀತಿಯ ತೊಂದರೆಗಳು ಸಂಭವಿಸದಂತೆ ಒಂದೇ ವರ್ಷದಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಬಿಟಿಎಂ ಲೇಔಟ್ ಮತ್ತು ಬೊಮ್ಮನಹಳ್ಳಿ ಕ್ಷೇತ್ರಗಳ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಮಳೆಯಿಂದ ತೊಂದರೆಗೆ ಒಳಗಾದ ಪ್ರದೇಶಗಳ ಪರಿಶೀಲನೆ ನ‌ಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕೆಲವು ಪ್ರದೇಶಗಳು ಮಳೆಯಿಂದ ತತ್ತರಿಸಿವೆ. ಇಂತಹ ಪ್ರದೇಶಗಳನ್ನು ಗುರುತಿಸಿ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಆರ್.ಅಶೋಕ್, ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಕೂಡಾ ಪರಿಶೀಲನೆ ನ‌ಡೆಸಿದರು.

ಮಳೆಗಾಲದ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪಾಲಿಕೆಯಲ್ಲಿ ವಿಶೇಷ ನಿಯಂತ್ರಣ ಕೊಠಡಿಯನ್ನು ತೆರೆಯಲಾಗುವುದು. ಸಾರ್ವಜನಿಕರು ದೂರು ನೀಡಿದ ಒಂದು ಗಂಟೆಯೊಳಗೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ವ್ಯವಸ್ಥೆ ಮಾಡಲಾಗುವುದು ಸುರೇಶ್ ಕುಮಾರ್ ಎಂದರು.

ನೂತನ ಭಾರತೀಯ ಜನತಾ ಪಕ್ಷದ ಸರ್ಕಾರ ಬೆಂಗಳೂರು ನಗರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಿಲಿಕಾನ್ ಸಿಟಿಯನ್ನು ಮಾದರಿ ನಗರವನ್ನಾಗಿಸುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಸುರೇಶ್ ಕುಮಾರ್ ಭರವಸೆನೀಡಿದರು.

ಕಳೆದ ಮೂರು ದಿನಗಳಿಂದ ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಚರಂಡಿಗಳಿಗೆ ಕಸ ಕಡ್ಡಿಗಳನ್ನು ಹಾಕಬಾರದು ಎಂದು ಜನಸಾಮಾನ್ಯರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತ ಎಸ್.ಸುಬ್ರಮಣ್ಯ ಮತ್ತಿತರರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X