ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ಸಿಕ್ಕಿತೇ ಕೆಪಿಸಿಸಿ ಅಧ್ಯಕ್ಷ ಪಟ್ಟ ?

By Staff
|
Google Oneindia Kannada News

ಬೆಂಗಳೂರು, ಜೂ. 5 : ಮಹತ್ವ ಬೆಳವಣಿಗೆಯೊಂದರಲ್ಲಿ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಆದೇಶದ ಮೇರೆಗೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಕಳೆದ ಚುನಾವಣೆಯ ಸೋಲು ಹಾಗೂ ಪಕ್ಷದ ಸ್ಥಿತಿಗತಿ ಕುರಿತಂತೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.

ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ತೆರವಾಗಲಿರುವ ಅಧ್ಯಕ್ಷ ಸ್ಥಾನದ ಮೇಲೆ ಸಿದ್ದು ಕಣ್ಣಿಟ್ಟಿದ್ದು, ಈ ಹಿನ್ನಲೆಯಲ್ಲಿ ಇಂದು ದೆಹಲಿಯಲ್ಲಿ ಸೋನಿಯಾ ಅವರೊಡನೆ ಮಾತುಕತೆಗೆ ಮಹತ್ವದ ಬಂದಿದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಸರಪಳಿಯಲ್ಲಿ ಮಿಂದೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ಹುಡುಕಾಟ ಆರಂಭಿಸಿದ್ದಾರೆ. ಪಕ್ಷ ಬಲವರ್ಧನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ವಿಷಯಗಳು ಚರ್ಚೆಗೆ ಬರಲಿವೆ.

ಅನೇಕ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅಕಾಂಕ್ಷಿಯಾಗಿರುವ ಸಿದ್ದುಗೆ ಜವಾಬ್ದಾರಿ ವಹಿಸಲು ಸೋನಿಯಾ ಮನಸ್ಸು ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಅಲ್ಲದೇ ಪಕ್ಷ ಬಲವರ್ಧನೆ ಜತೆಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಸಿದ್ದರಾಮಯ್ಯ ಹೊಂದಿರುವ ಕಾರಣ ಅಧ್ಯಕ್ಷ ಸ್ಥಾನಕ್ಕೆ ಅಲಂಕರಿಸುವ ಸಾಧ್ಯತೆಗಳಿವೆ. ವಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದಿತ್ತು. ಆದರೆ ವಿವಾದಗಳಿಗೆ ಎಡೆಮಾಡಿಕೊಡಬಾರದು ಎನ್ನುವ ಉದ್ದೇಶದಿಂದ ಹೈಕಮಾಂಡ್ ಖರ್ಗೆ ಅವರನ್ನು ಕುರಿಸಿ ಭಿನ್ನಮತ ಶಮನ ಮಾಡಿತು. ವಿಪಕ್ಷ ಸ್ಥಾನಕ್ಕೆ ಪರಮೇಶ್ವರ, ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಪ್ರಬಲ ಆಕಾಂಕ್ಷಿಗಳಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X