ಚಿತ್ರದುರ್ಗದ ಸಮೀಪ ಬಸ್ ಪಲ್ಟಿ ಏಳು ಸಾವು
ಚಿತ್ರದುರ್ಗ, ಜೂ. 5 : ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದರಿಂದ ಸ್ಥಳದಲ್ಲಿ 7 ಜನ ಮೃತಪಟ್ಟು, 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಮೀಪದ ಮೇದೆಹಳ್ಳಿ ಕ್ರಾಸ್ ಬಳಿ ಗುರುವಾರ ಜರುಗಿದೆ.
ಚಿತ್ರದುರ್ಗದಿಂದ ನಾಯಕನಹಟ್ಟಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ, ಸ್ಥಳದಲ್ಲಿ 7 ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಗಾಯಗೊಂಡವರನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಘಟನಾ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಖಾಸಗಿ ವಾಹನಗಳ ಪೈಪೋಟಿಯಿಂದಾಗಿ ಜೀವ ಭಯವಿಲ್ಲದೇ ವಾಹನ ಚಾಲನೆ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಲು ಕಾರಣವಾಗಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಬಸ್ ಪಲ್ಟಿ ಆಗಿರುವುದರಿಂದ ಆದರ ಅಡಿಯಲ್ಲಿ ಇನ್ನು ಕೆಲವರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications