ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೆಕ್ಕಿಗಳ ದರೋಡೆ ಮಾಡುತ್ತಿದ್ದ ತಂಡದ ಬಂಧನ

By Staff
|
Google Oneindia Kannada News

ಬೆಂಗಳೂರು, ಜೂ. 7 : ಸಾಫ್ಟ್ ವೇರ್ ಇಂಜಿನಿಯರ್ ಗಳನ್ನು ಬೆದರಿಸಿ ಹಣ ಕೀಳುತ್ತಿದ್ದ ಆರು ಜನ ದರೋಡೆಕೋರರ ತಂಡವನ್ನು ಶನಿವಾರ ಬಂಧಿಸಿರುವ ಕಲಾಸಿಪಾಳ್ಯ ಠಾಣೆ ಪೊಲೀಸರು, ಆರೋಪಿಗಳಿಂದ 4 ಲಕ್ಷ ರು. ನಗದು, 4 ಮೋಬೈಲ್ ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿರುವ ಬಂಧಿತ ಆರು ಜನರು ಕೂಡಾ ನಗರದ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಭರತ್ ಎಂಬ ಹೆಸರಿನ ಸಾಫ್ಟ್ ವೇರ್ ಕಂಪನಿಯೊಂದನ್ನು ನ‌ಡೆಸುತ್ತಿದ್ದ ಈ ದರೋಡೆಕೋರರು ಇತ್ತೀಚೆಗೆ ಉದ್ಯಮದಲ್ಲಿ ಅಪಾರ ನಷ್ಟ ಅನುಭವಿಸಿದ್ದರು. ಈ ಕಾರಣಕ್ಕೆ ಸಾಫ್ಟ್ ವೇರ್ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಅಪಹರಿಸಿ ಅವರಿಂದ ಹಣವನ್ನು ಕೀಳುವ ದಂಧೆಗಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕೆಂಗೇರಿ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಅಗತ್ಯ ಮಾಹಿತಿ ಮೇರೆಗೆ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದ ಕಲಾಸಿಪಾಳ್ಯ ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X