ರೈತರ ಸಮಸ್ಯೆಗಳನ್ನು ಚರ್ಚಿಸಲು ಶೆಟ್ಟರ್ ನೇತೃತ್ವದಲ್ಲಿ ಸಭೆ

ಹುಬ್ಬಳ್ಳಿ, ಜೂ. 10 : ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯನ್ನು ಪ್ರತಿಭಟಿಸಿ ಸೋಮವಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ಪೋಟಗೊಂಡಿದ್ದ ರೈತರ ಆಕ್ರೋಶ ಇಂದು ಬಹುತೇಕ ಶಾಂತವಾಗಿದೆ. ಈ ಕುರಿತು ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ರೈತರ ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದರೂ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿರಲಿಲ್ಲ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ.ಉದಾಸಿ ಘಟನಾ ಸ್ಥಳದ ಸುತ್ತಮುತ್ತಲಿದ್ದರೂ ಘಟನಾ ಸ್ಥಳಕ್ಕೆ ಬರದಿದ್ದದು ತೀವ್ರ ಟೀಕೆಗೆ ಗುರಿಯಾಗಿತ್ತು.

ರಸಗೊಬ್ಬರ ಕೊರತೆ ಆಭಾವದಿಂದ ರೊಚ್ಚಿಗೆದ್ದ ರೈತರು ಸೋಮವಾರ ತೀವ್ರ ಪ್ರತಿಭಟನೆಗೆ ಮುಂದಾಗಿದ್ದರು. ರಾಜ್ಯ ರಸ್ತೆ ಸಾರಿಗೆ ಬಸ್ಸಿಗೆ ಬೆಂಕಿ ಹಚ್ಚಿವುದರೊಂದಿಗೆ ಪೊಲೀಸ್ ವಾಹನವನ್ನು ಸುಟ್ಟು ಹಾಕಿದ್ದರು. ಪ್ರತಿಭಟನೆ ಎರಡು ಗಂಟೆಗಳ ಕಾಲ ನಡೆದರೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದ ಕೋಪಗೊಂಡ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು.

ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆ ಕುರಿತು ಚರ್ಚಿಸಲು ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಸಚಿವ ಬಸವರಾಜ್ ಹೊರಟ್ಟಿ, ಕೃಷಿ ಅಧಿಕಾರಿಗಳು ಹಾಗೂ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸೋಮವಾರ ನಡೆದ ಗಲಭೆಯ ಅವಲೋಕನ ಮಾಡುವ ನಿರೀಕ್ಷೆಯಿದೆ.

(ದಟ್ಸ್ ಕನ್ನಡ ವಾರ್ತೆ)
ಧಾರವಾಡದಲ್ಲಿ ಹಿಂಸಾರೂಪ ತಾಳಿದ ರೈತರ ಪ್ರತಿಭಟನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+