ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊರ ವರ್ತುಲ ರಸ್ತೆಗೆ ಸಚಿವ ಸಂಪುಟ ಒಪ್ಪಿಗೆ

By Staff
|
Google Oneindia Kannada News

BDA Proposed outer ring road mapಬೆಂಗಳೂರು, ಜೂ. 13 : ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಲು ಉದ್ದೇಶಿಸಿರುವ ಮೂರು ಸಾವಿರ ಕೋಟಿ ರು.ಗಳ ಹೊರ ವರ್ತುಲ ರಸ್ತೆಯ(ರಿಂಗ್ ರೋಡ್) ಮೊದಲ ಹಂತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಒಟ್ಟು 116 ಕಿಮೀ ಉದ್ದದ ರಸ್ತೆಯ ಪೈಕಿ ಮೊದಲ ಹಂತದಲ್ಲಿ 65 ಕಿಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗುವುದು. ಸದ್ಯ ನೈಸ್ ಸಂಸ್ಥೆ ನಿರ್ಮಿಸುತ್ತಿರುವ ರಸ್ತೆಗೂ, ಈ ರಸ್ತೆಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಿತ ವರ್ತುಲ ರಸ್ತೆ ಬಿಎಂಆರ್ ಡಿಎ ವ್ಯಾಪ್ತಿಯೂಳಗೆ ನಿರ್ಮಾಣವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ತುಮಕೂರು, ಬಳ್ಳಾರಿ, ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ ರಸ್ತೆ ನಿರ್ಮಾಣವನ್ನು ಮೊದಲ ಹಂತದಲ್ಲಿ ಕೈಗೆತ್ತುಕೊಳ್ಳಲಾಗುವುದು. ಖಾಸಗಿ ಸಹಭಾಗಿತ್ನ ಆಗಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಶುಲ್ಕವನ್ನು ಸಂಗ್ರಹ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.ನಾಲ್ಕು ಪಥದ ಎರಡು ಲೈನ್ ರಸ್ತೆಯ ಮಧ್ಯದಲ್ಲಿ 12 ಮೀಟರ್ ಜಾಗ ಉಳಿಸಲಾಗುತ್ತದೆ. ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಿದರು.

ಸದ್ಯಕ್ಕೆ ಅಕ್ರಮ ಸಕ್ರಮ ಜಾರಿ ಇಲ್ಲ: ಅನೇಕ ದಿನಗಳಿಂದ ಗೊಂದಲ ಗೂಡಾಗಿರುವ ಅಕ್ರಮ ಸಕ್ರಮ ಯೋಜನೆ ಕುರಿತು ಈ ಹಿಂದೆ ಕೈಗೊಂಡಿದ್ದ ನಿರ್ಣಯವನ್ನು ಸದ್ಯಕ್ಕೆ ಜಾರಿಗೊಳಿಸದಿರಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಯೋಜನೆಯಲ್ಲಿ ಸಾಕಷ್ಟು ಗೊಂದಲಗಳು ಇರುವುದರಿಂದ 2008ರ ಡಿಸೆಂಬರ್ ಅಂತ್ಯದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಪುಟ ತೀರ್ಮಾನಿಸಿದೆ. ಮುಂದಿನ ಜನವರಿ ವೇಳಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಕರಂದ್ಲಾಜೆ ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X