ಶೀಘ್ರದಲ್ಲೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ: ಅಂಬಿಕಾ ಸೋನಿ
ನವದೆಹಲಿ, ಜೂ.20: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಸಿಗಬೇಕು ಎಂಬ ಕೂಗಿಗೆ ಮನ್ನಣೆ ಸಿಗುವ ದಿನಗಳು ದೂರವಿಲ್ಲ. ಕನ್ನಡ ಮತ್ತು ತೆಲುಗು ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವೆ ಅಂಬಿಕಾ ಸೋನಿ ಹೇಳಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಮತ್ತು ಅಂಬಿಕಾ ಸೋನಿ ನಡುವೆ ನಡೆದ ಮಾತುಕತೆಯ ವೇಳೆ ಈ ವಿಚಾರ ಪ್ರಸ್ತಾಪವಾಯಿತು. ಎರಡು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದೆ. ಸಮಿತಿಯ ಸದಸ್ಯರ ನಡುವೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಅಂಬಿಕಾ ಸೋನಿ ತಿಳಿಸಿದರು.
ತಜ್ಞರ ಸಮಿತಿ ವರದಿ ನೀಡಿದ ಕೂಡಲೇ ಸೂಕ್ತ ಕ್ರಮಕ್ಕಾಗಿ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಶೀಘ್ರದಲ್ಲೇ ಸಮಿತಿ ವರದಿ ಬರಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ದ್ರಾವಿಡ ಭಾಷೆಗಳಲ್ಲಿ ತಮಿಳು ಭಾಷೆಗೆ ಮಾತ್ರ ಶಾಸ್ತ್ರೀಯ ಭಾಷೆಯ ಸ್ಥಾನ ನೀಡಲಾಗಿದೆ.
(ಏಜೆನ್ಸೀಸ್)












Click it and Unblock the Notifications