8ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಸೈಕಲ್ ಉಚಿತ

ಬೆಂಗಳೂರು, ಜೂ.20: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದ ಸರ್ಕಾರದ ಉಚಿತ ಸೈಕಲ್ ವಿತರಣೆ ಯೋಜನೆ ಈಗ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗಿದೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 7,02,781 ವಿದ್ಯಾರ್ಥಿಗಳು ಉಚಿತ ಸೈಕಲ್ ಯೋಜನೆಯ ಫಲಾನುಭವ ಪಡೆಯಲಿದ್ದಾರೆ. ಆದರೆ, ರಾಜ್ಯದ ನಗರಪಾಲಿಕೆ ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.

ಈ ಯೋಜನೆ ಕೂಡಲೆ ಜಾರಿಗೊಳಿಸಲು ಸೈಕಲ್‌ಗಳಿಗಾಗಿ ಟೆಂಡರ್ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಉಚಿತ ಸೈಕಲ್ ಯೋಜನೆಯನ್ನು ಜಾರಿಗೊಳಿಸಲು ಪ್ರಸಕ್ತ ಆರ್ಥಿಕ ವರ್ಷದಲ್ಲಿ 90ಕೋಟಿ ರು.ಗಳನ್ನು ಮೀಸಲಿಡಲಾಗಿದೆ. ಹಣದ ಕೊರತೆ ಉಂಟಾದರೆ ಮುಂದಿನ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ಈ ಯೋಜನೆಯನ್ನು 2006-07ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳಿಗಾಗಿ ಜಾರಿಗೊಳಿಸಿತ್ತು. 1.75 ಲಕ್ಷ ಹೆಣ್ಣುಮಕ್ಕಳಿಗೆ 35.5 ಕೋಟಿ ರು. ವೆಚ್ಚದಲ್ಲಿ ಸೈಕಲ್‌ಗಳನ್ನು ವಿತರಿಸಲಾಗಿತ್ತು. ನಂತರ ಈ ಯೋಜನೆ ಬಡ ಕುಟುಂಬದ ಗಂಡು ಮಕ್ಕಳಿಗೂ ವಿಸ್ತರಿಸಲಾಯಿತು. ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಈಗ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸಲಿದೆ.

(ದಟ್ಸ್‌ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+