• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಾರಾಯಣಸ್ವಾಮಿ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣ

By Staff
|

Kharge visits Anjanapura in Shivamogga districtಶಿವಮೊಗ್ಗ, ಜೂ. 22 : ಶಿಕಾರಿಪುರ ತಾಲೂಕಿನ ಅಂಜನಾಪುರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ನಾರಾಯಣಸ್ವಾಮಿ ಮನೆಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದಂಥ ಸಂದರ್ಭದಲ್ಲಿ ರಸಗೊಬ್ಬರ ಕೊರತೆಯ ಬಗ್ಗೆ ಖರ್ಗೆಯವರಿಗೆ ಮಾಹಿತಿ ನೀಡಿದ ಜೆಡಿಎಸ್‌ನ ಕಾರ್ಯಕರ್ತ ಗಜೇಂದ್ರ ಎಂಬುವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ತಾಲೂಕಿನಲ್ಲಿ ರಸಗೊಬ್ಬರದ ಕೊರತೆಯಿದೆ ಮತ್ತು ರಸಗೊಬ್ಬರ ಕೊರತೆಯಿಂದಾಗಿಯೇ ನಾರಾಯಣಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗಜೇಂದ್ರ ಮಾಹಿತಿ ನೀಡಿದ್ದು ಸ್ಥಳದಲ್ಲಿ ಇದ್ದ ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ. ಖರ್ಗೆ ಅಲ್ಲಿಂದ ತೆರಳಿದ ನಂತರ ಗಜೇಂದ್ರನೊಡನೆ ಮಾತಿನ ಚಕಮಕಿಗಿಳಿದ ಬಿಜೆಪಿ ಕಾರ್ಯಕರ್ತರು ಆತನನ್ನು ಬೆನ್ನತ್ತಿಕೊಂಡು ಥಳಿಸಿದ್ದಾರೆ. ಗಜೇಂದ್ರ ಅವರು ವ್ಯವಸಾಯ ಸಹಕಾರ ಒಕ್ಕೂಟದ ನಿರ್ದೇಶಕರಾಗಿದ್ದಾರೆ.

ಶನಿವಾರ ಅಂಜನಾಪುರಕ್ಕೆ ಭೇಟಿ ನೀಡಿದಾಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಾರಾಯಣಸ್ವಾಮಿ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಹೊರತು ರಸಗೊಬ್ಬರ ಕೊರತೆಯಿಂದ ಸತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.

ಇಂದು ಗಜೇಂದ್ರ ಮುಖ್ಯಮಂತ್ರಿಯವರ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ಸಹಜವಾಗಿ ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ. ಗಜೇಂದ್ರ ಅವರನ್ನು ಮಾತ್ರವಲ್ಲದೇ ಈ ಘಟನೆಯನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮದವರ ಮೇಲೂ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆ.

ನಾರಾಯಣಸ್ವಾಮಿ ರಸಗೊಬ್ಬರ ಕೊರತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಇದನ್ನು ಅಲ್ಲಗಳೆದು ಬಿಜೆಪಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂಬ ಶಂಕೆ ಮೂಡುವಂತೆ ಮಾಡಿದೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ. ಬಿಜೆಪಿ ರೈತರ ಆತ್ಮಹತ್ಯೆಯಲ್ಲಿಯೂ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ನಿಂದ ಪರಿಹಾರ : ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಎಲ್ಲ ಕುಟುಂಬಗಳಿಗೆ ತಲಾ 50 ಸಾವಿರ ರು. ಪರಿಹಾರ ನೀಡಲು ಕಾಂಗ್ರೆಸ್ ನಿರ್ಧರಿಸಿದೆ.

(ದಟ್ಸ್‌ಕನ್ನಡ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more