ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜು.1 ರಿಂದ ಸರಕು ಸಾಗಣೆ ಲಾರಿಗಳ ಮುಷ್ಕರ
ಬೆಂಗಳೂರು, ಜೂ. 28 : ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.1 ರಿಂದ ರಾಷ್ಟ್ರವ್ಯಾಪಿ ಅನಿರ್ಧಿಷ್ಟಾವಧಿ ಕರೆ ನೀಡಿರುವ ಲಾರಿ ಮುಷ್ಕರಕ್ಕೆ,ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಬೆಂಬಲ ಘೋಷಿಸಿದೆ.
ಹಲವು ಬೇಡಿಕೆ ಮತ್ತು ಒಪ್ಪಂದ ಉಲ್ಲಂಘಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.ಮುಖ್ಯವಾಗಿ 2004ರಲ್ಲಿ ಸಾಗಾಣಿಕೆದಾರರೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಸೇವಾ ತೆರಿಗೆಯನ್ನು ರದ್ದು ಮಾಡುವ ಒಪ್ಪಂದವನ್ನು ಕೇಂದ್ರ ಸರ್ಕಾರ ಉಲ್ಲಂಘಿಸಿದೆ ಎಂದು ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ಆರೋಪಿಸಿದ್ದಾರೆ.
ಈಗಾಗಲೇ ಹಣದುಬ್ಬರ ಮೂಲಕ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇನ್ನು ಲಾರಿ ಮಾಲೀಕರ ಸಂಘ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರದಿಂದ ಮತ್ತಷ್ಟು ಬೆಲೆ ಏರಿಕೆಯಾಗಲಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, June 28, 2008, 17:41 [IST]