ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಇಲ್ಲ

By Staff
|
Google Oneindia Kannada News

ಬೆಂಗಳೂರು, ಜು. 2 : ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಡ್ಡಾಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಭಾಷಾ ನೀತಿಗೆ ಸಂಬಂಧಿಸಿಂತೆ ಸುಮಾರು 14 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ ಖಾಸಗಿ ಶಾಲಾ ಮಂಡಳಿಗಳಿಗೆ ಜಯ ಸಿಕ್ಕಿದ್ದು, ಇದರಲ್ಲಿ ಸರ್ಕಾರಕ್ಕೆ ಹಿನ್ನಡೆ ಅನುಭವಿಸುವಂತಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ ಮಾತೃ ಭಾಷೆಯನ್ನೇ ಬೋಧನಾ ಮಾಧ್ಯಮವಾಗಿ ಬಳಸಬೇಕೆಂದು 1994 ರಲ್ಲಿ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. 2006ರಲ್ಲಿ ಅನೇಕ ತಿಂಗಳು ಕಾಲ ನಡೆದ ವಾದ ಪ್ರತಿವಾದಗಳನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಹಾಗೂ ನ್ಯಾಯಮೂರ್ತಿಗಳಾದ ಮಂಜುಳಾ ಚೆಲ್ಲೂರು ಮತ್ತು ಎನ್. ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಬುಧವಾರ ಈ ತೀರ್ಪು ನೀಡಿದೆ.

1994ರಲ್ಲಿ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಪ್ರಾಥಮಿಕ ಶಾಲೆಗಳಲ್ಲಿ ಮಾತೃ ಭಾಷೆ ಬೋಧನಾ ಮಾಧ್ಯಮವಾಗಿ ಬಳಸಬೇಕೆಂಬುದು ಸರಿಯಾದ ಕ್ರಮವಲ್ಲ. ಬೇರೆಡೆಯಿಂದ ಬಂದಿರುವವವರಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡುವುದು ತರವಲ್ಲ. ಆಯಾ ಭಾಷೆ, ಜನಾಂಗ, ಸ್ಥಳಕ್ಕೆ ಅನುಗುಣವಾಗಿ ಅವರು ಶಿಕ್ಷಣ ಪಡೆದುಕೊಳ್ಳಲಿ. ಆದರೆ ಕನ್ನಡ ಕಡ್ಡಾಯ ಸಮಂಜಸವಲ್ಲ. ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಯಾವುದೇ ತಕರಾರು ಇಲ್ಲ ಎಂದು ಪೀಠ ಹೇಳಿದೆ.

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರಿಂದ ನಗರ ಪ್ರದೇಶದ ಖಾಸಗಿ ಶಾಲೆಯಲ್ಲಿ ಹಾಜರಾತಿ ಕಡಿಮೆಯಾಗಿ ಶಾಲಾ ಆಡಳಿತ ಮಂಡಳಿ ತೀವ್ರ ಸಮಸ್ಯೆ ಎದುರಿಸಿತ್ತು. ರಾಜ್ಯದ ಸುಮಾರು 1200 ಹೆಚ್ಚು ಶಾಲೆಗಳು ಇದರ ವ್ಯಾಪ್ತಿಗೆ ಒಳಪಟ್ಟಿದ್ದವು. ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಅನುದಾನ ರಹಿತ ಶಾಲೆಗಳಲ್ಲೂ ಕೂಡಾ ಈ ನಿಯಮ ಅನ್ವಯಿಸಲಿದೆ ಎಂದು ಸರ್ಕಾರ ಸೂಚನೆ ನೀಡಿತ್ತು. ಆದರೆ ಸರ್ಕಾರದಿಂದ ಅನುದಾನ ಪಡೆಯುವ ಶಾಲೆಗಳು ಕಡ್ಡಾಯವಾಗಿ ಸರ್ಕಾರದ ನಿಯಮವನ್ನು ಪಾಲಿಸಬೇಕು ಎಂದು ಪೀಠ ಆದೇಶಿಸಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X