ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸಿಎಂ ಅಭಯ
ಧಾರವಾಡ, ಜು. 4 : ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕ್ರಿಯಾ ಯೋಜನೆ ರೂಪಿಸಿ ವಿಶೇಷ ಅನುದಾನ ನೀಡುವ ಮೂಲಕ ಅವಳಿ ನಗರವನ್ನು ಮಹಾನಗರವನ್ನಾಗಿಸುವ ಇಂಗಿತವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ವ್ಯಕ್ತಪಡಿಸಿದರು.
ಶುಕ್ರವಾರ ಹೈಕೋರ್ಟ್ ಸಂಚಾರಿ ಪೀಠ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಸೃಜನ ರಂಗಮಂದಿರದಲ್ಲಿ ಏರ್ಪಡಿಸಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅವಳಿ ನಗರದ ಸರ್ವತೋಮುಖ ಬೆಳವಣಿಗೆಯೇ ಸರ್ಕಾರದ ಪ್ರಥಮ ಅಧ್ಯತೆ ಎಂದರು. ಮೂಲಭೂತ ಸಮಸ್ಯೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗುವುದು ಎಂದ ಯಡಿಯೂರಪ್ಪ, ಮುಖ್ಯವಾಗಿ ಕುಡಿಯುವ ನೀರು, ರಸ್ತೆಗಳ ಗುಣಮಟ್ಟದ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಮೂರನೇ ಕ್ರಿಯಾ ಯೋಜನೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ, ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವುದು, ಇದಕ್ಕೆ ಬೇಕಾಗಿರುವ ಜಮೀನನ್ನು ಶೀಘ್ರದಲ್ಲಿ ಸಂಬಂಧಿಸಿದ ಇಲಾಖೆಗೆ ನೀಡುಲಾಗುವುದು. ರಸ್ತೆಗಳ ಗುಣಮಟ್ಟವನ್ನು ಮೇಲ್ಮಟ್ಟಕ್ಕೆ ಏರಿಸಲಾಗುತ್ತದೆ, ಅವಳಿ ನಗರದ ಸಂಚಾರೈ ದಟ್ಟಣೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications