• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಸಾಂತ್ಯಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ

By Staff
|

ಬೆಂಗಳೂರು, ಜು. 14 : ಪ್ರದೇಶ ಕಾಂಗ್ರೆಸ್ ಸಮಿತಿಗೆ ಈ ತಿಂಗಳ ಅಂತ್ಯದಲ್ಲಿ ನೂತನ ಅಧ್ಯಕ್ಷರ ನೇಮಕವಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಆತ್ಮಾವಲೋಕನ ಸಭೆಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಕ್ತ ನಾಯಕನನ್ನು ಆಯ್ಕೆ ಮಾಡಲಿದೆ ಎಂದರು. ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಯಲ್ಲಿದ್ದ ಅಧಿಕಾರವನ್ನು ಬಿಟ್ಟು ಬಂದವರು, ಅಧಿಕಾರ ಮತ್ತು ಪದವಿಯ ಆಸೆ ಅವರಿಗಿಲ್ಲ ಎಂದ ಖರ್ಗೆ, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಕಾರ್ಯಕ್ರಮಗಳಿಂದ ಸಿದ್ದರಾಮಯ್ಯ ದೂರ ಉಳಿದಿರುವ ಬಗ್ಗೆ ಪ್ರಶ್ನಿಸಿದರೆ, ಎಲ್ಲರೂ ಎಲ್ಲ ಕಡೆ ಪಾಲ್ಗೊಳ್ಳಲು ಸಾಧ್ಯವಾಗದ ಮಾತು. ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ಹಣ ಮತ್ತು ಅಧಿಕಾರ ದಾಹದಿಂದ ಬಿಜೆಪಿಗೆ ವಲಸೆ ಹೋಗಿರುವವರನ್ನು ಸಿದ್ದರಾಮಯ್ಯ ಅವರಿಗೆ ಹೋಲಿಸುವುದು ತಪ್ಪು ಎಂದರು.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more