ತಿಂಗಳೊಳಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿವಿಎಸ್?

ಬೆಂಗಳೂರು, ಜು. 15 : ಮೌಲ್ಯವರ್ಧಿತ ಆಸ್ತಿ ತೆರಿಗೆ ವಿಷಯಕ್ಕೆ ಸಂಬಂಧಿಸಿದಂತೆ ಸಂಪುಟದಲ್ಲಿ ಚರ್ಚಿಸಿ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಬಿಬಿಎಂಪಿ ಆಯುಕ್ತ ಸುಬ್ರಮಣ್ಯ ಹೇಳಿದ್ದಾರೆ.

ಅನೇಕ ದಿನಗಳಿಂದ ವಾದ-ವಿವಾದಗಳನ್ನು ಹುಟ್ಟುಹಾಕಿದ್ದ ಅಕ್ರಮ ಸಕ್ರಮ ಯೋಜನೆಯ ಸಾಧಕ ಬಾಧಕಗಳ ಕುರಿತು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಜನರಿಗೆ ಹೊರೆಯಾಗದಂತೆ ನಿರೀಕ್ಷೆಗೆ ತಕ್ಕಂತೆ ತೆರಿಗೆ ಪದ್ಧತಿಯನ್ನು ಜಾರಿಗೆ ತರಲಾಗುವುದು ಎಂದರು.

ರಾಜ್ಯದ ಎಲ್ಲ ಭಾಗಗಳಲ್ಲಿ ಮೌಲ್ಯವರ್ಧಿತ ತೆರಿಗೆ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಆದರೆ ಬೆಂಗಳೂರಿನಲ್ಲಿ ಜಾರಿಗೆ ತರಲು ಸರ್ಕಾರ ಪ್ರಯತ್ನಿಸಿತ್ತು. ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಪದ್ಧತಿಯನ್ನು ಜಾರಿಗೆ ತಂದಿರಲಿಲ್ಲ. ಇಂದು ನಡೆಸಿದ ಸಂವಾದದಲ್ಲಿ ಭಾಗವಹಿಸಿದ ಬಹುತೇಕ ಜನರು ಸ್ವಯಂ ಘೋಷಿತ ಆಸ್ತಿ ಪದ್ಧತಿಯನ್ನೇ ಮುಂದುವರೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮೌಲ್ಯವರ್ಧಿತ ತೆರಿಗೆ ಪದ್ಧತಿಯಲ್ಲಿ ಅನೇತ ನೂನ್ಯತೆಗಳಿವೆ. ಅವುಗಳನ್ನು ಸರಿಪಡಿಸಿ ಜನರಿಗೆ ಹೊರೆಯಾಗದಂತೆ ಕಾನೂನಿನ ಚೌಕಟ್ಟಿನೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಆರ್.ಅಶೋಕ್, ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ, ಅಬಕಾರಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಹಾಗೂ ಬೃಹತ್ ಬೆಂಗಳೂರು ವ್ಯಾಪ್ತಿಗೆ ಸೇರಿದ ಎಲ್ಲ ಶಾಸಕರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+