ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಲಂಪಿಕ್ಸ್ ಗೆ ಪ್ರಧಾನಮಂತ್ರಿಗೆ ಆಹ್ವಾನವಿಲ್ಲ

By Staff
|
Google Oneindia Kannada News

ನವದೆಹಲಿ, ಜು. 15 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬೀಜಿಂಗ್ ನಲ್ಲಿ ನಡೆಯಲಿರುವ 2008ರ ಒಲಂಪಿಕ್ಸ್ ಕ್ರೀಡಾಕೂಟಗಳಿಗೆ ಆಹ್ವಾನ ಬಂದಿದೆ. ಆದರೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಇಲ್ಲಿಯವರೆಗೆ ಯಾವುದೇ ಅಧಿಕೃತವಾಗಿ ಆಹ್ವಾನ ನೀಡದಿರುವ ಸಂಗತಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಆಗಸ್ಟ್ 8 ರಂದು ಚೀನಾದ ಬೀಜಿಂಗ್ ನಲ್ಲಿ ನಡೆಯಲಿರುವ ಒಲಂಪಿಕ್ ಕ್ರೀಡಾಕೂಟ ವರ್ಣರಂಜಿತ ಉದ್ಘಾಟನೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಸೇರಿದಂತೆ ಅಮೇರಿಕ ಅಧ್ಯಕ್ಷ ಜಾರ್ಜ್ ಬುಷ್, ಪ್ರಾನ್ಸ್ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರನ್ನು ಒಲಂಪಿಕ್ ಸಮಿತಿ ಅಧಿಕೃತ ಅಹ್ವಾನ ನೀಡಿದೆ. ಯುಪಿಎಗೆ ನೀಡಿದ ಬೆಂಬಲವನ್ನು ಎಡಪಕ್ಷಗಳು ಹಿಂತೆಗೆದುಕೊಂಡಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸಂಕಷ್ಟದಲ್ಲಿ ಸಿಲುಕಿದೆ. ಜತೆಗೆ ಜು. 22 ರಂದು ಸಂಸತ್ತಿನಲ್ಲಿ ವಿಶ್ವಾಸಮತ ಪ್ರದರ್ಶನ ಮಾಡಬೇಕಿದ್ದರಿಂದ ಸೋನಿಯಾ ಗಾಂಧಿ ಬೀಜಿಂಗ್ ಗೆ ತೆರಳಲು ನಿರಾಕರಿಸಿದ್ದಾರೆ.

ಪ್ರಧಾನಮಂತ್ರಿಯವರಿಗೆ ಅಧಿಕೃತ ಆಹ್ವಾನವಿಲ್ಲದಿದ್ದರೂ ಕೇಂದ್ರದ ಕ್ರೀಡಾ ಸಚಿವ ಎಂ.ಎಸಿ.ಗಿಲ್ ಒಲಂಪಿಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಮಂತ್ರಿಗೆ ಅಹ್ವಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಲು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ. ಪ್ರಧಾನಮಂತ್ರಿ ಮಾಧ್ಯಮ ಸಲಹೆಗಾರ ಸಂಜಯ ಬರುವ ಕೂಡಾ ಅಧಿಕೃತ ಅಹ್ವಾನ ಬಂದಿಲ್ಲ. ಯಾಕೆ ಎನ್ನುವ ಕುರಿತು ಹೆಚ್ಚಿನ ಮಾಹಿತಿ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚೀನಾ ಅಧಿಕಾರಿಗಳ ಗಮನಕ್ಕೆ ಈ ವಿಷಯ ಬಂದಿರಕ್ಕಿರಲಿಲ್ಲ ಎಂದು ಮೂಲ ಹೇಳುತ್ತದೆ. ಆದರೆ ಇನ್ನೊಂದು ಮೂಲದ ಪ್ರಕಾರ ಭಾರತದ ಪ್ರಧಾನಿ ಅವರನ್ನ ಬೇಕಂತಲೇ ಕಡೆಗಣಿಸಲಾಗಿದೆ ಎಂದು ತಿಳಿಸಿದೆ. ಆದರೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕಳೆದ ಜಿ.8 ಶೃಂಗ ಸಭೆ ಮತ್ತು ಪಶ್ಚಿಮ ಏಷ್ಯಾ ದೇಶಗಳ ಸಭೆಗಳಲ್ಲಿ ಚೀನಾ ಅಧ್ಯಕ್ಷ ಹೂ ಜಿಂಟಾವೂ ಅವರನ್ನು ಎರಡು ಸಲ ಭೇಟಿ ಮಾಡಿದ್ದಾರೆ. ಇಷ್ಟಾದರೂ ಪ್ರಧಾನಿಯವರು ಅವರ ಗಮನಕ್ಕೆ ಬಂದಿಲ್ಲ ಎನ್ನುವುದು ಆಶ್ಚರ್ಯಕರ ಸಂಗತಿ ಎಂದು ಬರುವ ಪ್ರತಿಕ್ರಿಯಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X