ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಗ್ಗೇಶ್ ಬಿಜೆಪಿ ಸೇರ್ಪಡೆ ಖಂಡಿಸಿ 'ಛೀ ಥೂ' ಬಂದ್!

By Staff
|
Google Oneindia Kannada News

jaggeshತುರುವೇಕೆರೆ, ಜು. 16 : ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವ ಜಗ್ಗೇಶ್ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನೀಡಿದ್ದ 'ಛೀ ಥೂ' ತುರುವೇಕೆರೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬಹುತೇಕ ಸರ್ಕಾರಿ ಕಚೇರಿಗಳು ಕಾರ್ಯ ಸ್ಥಗಿವಾಗಿದ್ದು ಬಸ್ಸು ಸಂಚಾರ ಅಸ್ತವ್ಯಸ್ತಗೊಂಡಿದೆ.

ಇತ್ತೀಚೆಗೆ ತುರುವೇಕೆರೆ ಶಾಸಕರಾಗಿದ್ದ ಚಿತ್ರನಟ ಜಗ್ಗೇಶ್, ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಇದನ್ನು ತೀವ್ರ ಖಂಡಿಸಿದ ಜಿಲ್ಲಾ ಕಾಂಗ್ರೆಸ್ ಘಟಕ ಮಾಜಿ ಸಂಸದ ಜಿ.ಎಸ್.ಬಸವರಾಜು, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಮತ್ತು ಶಕೀಲ್ ಅಹ್ಮದ್ ನೇತೃತ್ವದಲ್ಲಿ 'ಛೀ ಥೂ ' ಎಂಬ ವಿಶೇಷ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಹಿನ್ನಲೆಯಲ್ಲಿ ತುರುವೇಕೆರೆ ಬಂದ್ ಗೆ ಕರೆ ಕೊಡಲಾಗಿತ್ತು.

ಜಗ್ಗೇಶ್ ಅವರಿಗೆ ಕಾಂಗ್ರೆಸ್ ಪಕ್ಷ ರಾಜಕೀಯ ಕ್ಷೇತ್ರದಲ್ಲಿ ಒಂದು ಸ್ಥಾನಮಾನ ನೀಡಿತ್ತು. ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರನ್ನು ಶಾಸಕರನ್ನಾಗಿ ಮಾಡಿದ್ದೆವು. ಅತ್ತು ಕರೆದೂ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಅವರು, ಈಗ ಏಕಾಏಕಿ ಪಕ್ಷ ತೊರೆದಿರುವುದು ಭಾರಿ ಮೋಸದ ಜತೆಗೆ ಕ್ಷೇತ್ರದ ಜನತೆಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಅವರ ಕ್ರಮವನ್ನು ಖಂಡಿಸಿ ಬಂದ್ ಕರೆ ನೀಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ. ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು, ಶಾಲಾ ಕಾಲೇಜುಗಳು , ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ. ಮುಂಜಾಗ್ರತ ಕ್ರಮವಾಗಿ ಪೊಲೀಸರು ಅಗತ್ಯ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಜಗ್ಗೇಶ್ ಸೇರಿ ಎಲ್ಲ ಪಕ್ಷಾಂತರಿಗಳಿಗೆ ಧಿಕ್ಕಾರ
ಬಿಎಸ್‌ವೈ ಸಚಿವ ಸಂಪುಟಕ್ಕೆ ಮೂವರ ಸೇರ್ಪಡೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X