ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಐಎಗೆ ಅತಿಸೂಕ್ಷ್ಮವಿಮಾನ ನಿಲ್ದಾಣ ಎಂಬ ಹಣೆಪಟ್ಟಿ

By Staff
|
Google Oneindia Kannada News

ಬೆಂಗಳೂರು, ಜು.19: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಬಿಐಎ) ಗುಪ್ತದಳ ಮತ್ತು ಕೇಂದ್ರ ಗೃಹ ಇಲಾಖೆ ಅತಿ ಸೂಕ್ಷ್ಮ ವಿಮಾನ ನಿಲ್ದಾಣ ಎಂದು ಗುರುತಿಸಿದೆ. ಮಾದಕ ಮತ್ತು ನಿಷೇಧಿಕ ವಸ್ತುಗಳ ಸಾಗಣಿಕೆ ಹಾಗೂ ನಕಲಿ ಪಾಸ್‌ಪೋರ್ಟ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಬಿಐಎಗೆ ಈ ಮುದ್ರೆ ಬಿದ್ದಿದೆ.

ಮಾದಕ ವಸ್ತುಗಳಾದ ಗಾಂಜಾ, ಆಫೀಮು ಮುಂತಾದ ವಸ್ತುಗಳನ್ನು ಸಾಗಿಸಲು ಬಿಐಎಯನ್ನು ಮುಖ್ಯ ಕೇಂದ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ನಕಲಿ ಪಾಸ್‌ಪೋರ್ಟ್‌ಗಳನ್ನು ಬಳಸಿ ವಿದೇಶಕ್ಕೆ ಹೋಗಲು ಹಲವರು ಪ್ರಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಾರೆ. ಇದಿಷ್ಟೇ ಅಲ್ಲದೆ ಸಮಾಜಘಾತುಕ ಶಕ್ತಿಗಳಿಗೆ ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣವಾಗಿದೆ. ಈ ಎಲ್ಲ ಕಾರಣಗಳಿಂದ ಬಿಐಎಯನ್ನು ಅತಿ ಸೂಕ್ಷ್ಮ ವಿಮಾನ ನಿಲ್ದಾಣ ಎಂದು ಘೋಷಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ನಿಲ್ದಾಣ, ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಅತಿಸೂಕ್ಷ್ಮ ವಿಮಾನ ನಿಲ್ದಾಣಗಳು ಎಂದು ಗುರುತಿಸಲಾಗಿದೆ. ಈ ಸಾಲಿಗೆ ಬಿಐಎ ಹೊಸ ಸೇರ್ಪಡೆಯಾಗಿದೆ. ಇನ್ನು ಮುಂದೆ ಬಿಐಎಯಲ್ಲಿ ಭದ್ರತೆ ಮತ್ತಷ್ಟು ಹೆಚ್ಚಾಗಲಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯನ್ನು ಈಗಾಗಲೇ ನಿಯೋಜಿಸಲಾಗಿದೆ. ಭದ್ರತಾ ಸಿಬ್ಬಂದಿಗೆ ಎ.ಕೆ.47 ಬಂದೂಕುಗಳನ್ನು ನೀಡಲಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ವಿಚಾರಣಾ ಕೊಠಡಿಯನ್ನು ತೆರೆಯಲಾಗುತ್ತದೆ. ವಿಮಾನ ನಿಲ್ದಾಣಕ್ಕೆ ಹೋಗುವ ಮತ್ತು ಬರುವವರ ಮೇಲೆ ನಿಗಾ ಇಡಲಾಗುತ್ತದೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X