ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ(ಜು. 25)ದಿಂದ ಲೋಡ್ ಶೆಡ್ಡಿಂಗ್ ಆರಂಭ

By Staff
|
Google Oneindia Kannada News

ಬೆಂಗಳೂರು, ಜು. 25 : ರಾಜ್ಯದಲ್ಲಿ ತೀವ್ರ ವಿದ್ಯುತ್ ಆಭಾವವಿರುವ ಹಿನ್ನಲೆಯಲ್ಲಿ ಜುಲೈನಲ್ಲಿ ಶೇ. 20 ರಷ್ಟು ವಿದ್ಯುತ್ ಕಡಿತ ಮಾಡಲಾಗುವುದು ಎಂದು ಸರ್ಕಾರ ಪ್ರಕಟಿಸಿದ ಬೆನ್ನಲ್ಲೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಡೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅಧಿಕೃತವಾಗಿ ಜಾರಿಗೊಳಿಸಲಾಗಿರುವ ಲೋಡ್ ಶೆಡ್ಡಿಂಗ್ ವೇಳಾಪಟ್ಟಿ ಶುಕ್ರವಾರದಿಂದ ಜಾರಿಗೊಳ್ಳಲಿದೆ. ಬೆಂಗಳೂರು ಹೊರತುಪಡಿಸಿ ಉಳಿದೆಡೆ 6 ಗಂಟೆಗ ಕಾಲ ಲೋಡ್ ಶೆಡ್ಡಿಂಗ್ ಜಾರಿಯಲ್ಲಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರಿಗೆ ಪ್ರತಿ ದಿನ 13 ಗಂಟೆಗಳ ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಪಂಪ್ ಸೆಟ್ ಗಳಿಗೆ ಕೇವಲ 5 ಗಂಟೆ ಕಾಲ ಮಾತ್ರ ಮೂರು ಫೇಸ್ ವಿದ್ಯುತ್ ದೊರೆಯಲಿದೆ. ಸಿಂಗಲ್ ಫೇಸ್ ವಿದ್ಯುತ್ 6 ಗಂಟೆ ಕಾಲ ಸಿಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ವಾಣಿಜ್ಯ ಮತ್ತು ಗೃಹ ಬಳಿಕೆದಾರರಿಗೆ ನಾಲ್ಕರಿಂದ ಆರು ಗಂಟೆ ವರೆಗೆ ಲೋಡ್ ಶೆಡ್ಡಿಂಗ್ ಮಾಡುವ ಸಂಭವವಿದೆ. ಕೈಗಾರಿಕೆಗಳಿಗೆ ಬೆಳಗ್ಗೆ 10 ರಿಂದ ಸಂಜೆ 6 ಗಂಚೆ ಅವಧಿಯೊಳಗೆ ಸರದಿಯಂತೆ ಎರಡು ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ.

ನಗರದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಲೋಡ್ ಶೆಡ್ಡಿಂಗ್ ಸಮಯ ಬೇರೆಬೇರೆಯಾಗಿರಲಿದ್ದು, ಪ್ರತಿ 15 ದಿನಕ್ಕೊಮ್ಮೆ ಸರದಿಯಂತೆ ಬದಲಾಯಿಸಲಾಗುವುದು. ಛತ್ತೀಸ್ ಗಢದಲ್ಲಿ 1000 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸದ್ಯಕ್ಕೆ ರಾಜ್ಯದಿಂದ 300 ಮೆಗಾವ್ಯಾಟ್ ವಿದ್ಯುತ್ ಪಡೆಯುವುದು ಘಟಕದ ಸ್ಥಾಪನೆ ಒಡಂಬಡಿಕೆ ಪತ್ರಕ್ಕೆ ಸಹಿ ಮತ್ತಿತರ ಪ್ರಮುಖ ಕೆಲಸಗಳು ಅಂದೇ ನಡೆಯಲಿವೆ.

(ದಟ್ಸ್ ಕನ್ನಡ ವಾರ್ತೆ)

ಇನ್ನೆರಡು ತಿಂಗಳು ಲೋಡ್ ಶೆಡ್ಡಿಂಗ್ ಜಾರಿ:ಈಶ್ವರಪ್ಪ
ಇನ್ಫಿಯಿಂದ ವಿದ್ಯುತ್ ವಲಯಕ್ಕೆ ನೂತನ ತಂತ್ರಾಂಶ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X