ಬೆಂಗಳೂರಿನಲ್ಲಿ 3 ಕಡೆ ನಿಗೂಢ ಸ್ಫೋಟ
ಬೆಂಗಳೂರು, ಜು. 25 : ನಗರದಲ್ಲಿ ಇಂದು ಮಧ್ಯಾಹ್ನ ಮೂರು ಕಡೆ ನಿಗೂಢ ಸ್ಫೋಟ ಸಂಭವಿಸಿದೆ. 1:15ರ ಸುಮಾರಿಗೆ ಆಡುಗೋಡಿಯ ಪೋತಾಳಪ್ಪ ಗಾರ್ಡನ್ ನಲ್ಲಿ ಸ್ಫೋಟ ಸಂಭವಿಸಿದ್ದು, ಮಡಿವಾಳ ಚೆಕ್ ಸ್ಫೋಟದ ಬಸ್ ನಿಲ್ದಾಣದಲ್ಲಿ ಹಾಗೂ ಮೈಸೂರು ರಸ್ತೆಯಲ್ಲಿರುವ ನಾಯಂಡನಹಳ್ಳಿಯಲ್ಲಿ ಸ್ಫೋಟ ಸಂಭವಿಸಿದೆ. ಓರ್ವ ಮಹಿಳೆ ಸೇರಿದಂತೆ ಮೂವರು ಸತ್ತಿವರ ಶಂಕೆ ವ್ಯಕ್ತಪಡಿಸಲಾಗಿದೆ.
ಮಡಿವಾಳ ಚೆಕ್‌ಪೋಸ್ಟ್‌ನಲ್ಲಿ ನಡೆದ ಸ್ಫೋಟದಲ್ಲಿ ನಾಲ್ವರಿಗೆ ತೀವ್ರವಾಗಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಚ್ಚಿದ ಜನತೆ ಕೆಲಸ ಕಾರ್ಯ ಬಿಟ್ಟು ಮನೆಗೆ ತೆರಳುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಇತ್ತೀಚಿನ ವರದಿ
ಸ್ಪೋಟಗಳ ಹಿಂದೆ ಭಯೋತ್ಪಾದಕರ ಕೈವಾಡ :ಬಿದರಿ












Click it and Unblock the Notifications