ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಹಮದಾಬಾದ್‌ಗೆ ಪ್ರಧಾನಿ, ಸೋನಿಯಾ ಭೇಟಿ

By Staff
|
Google Oneindia Kannada News

ಅಹಮದಾಬಾದ್, ಜು. 28: ಶನಿವಾರ( ಜು.26) ಉಗ್ರರ ಅಟ್ಟಹಾಸಕ್ಕೆ ತತ್ತರಿಸಿರುವ ಅಹಮದಾಬಾದ್ ನಗರಕ್ಕೆ ಇಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘಟನಾ ಸ್ಥಳಕ್ಕೆ ಭೇಟಿ ನೀಡುವರು. ಇವರ ಜತೆಗೆ ಕೇಂದ್ರದ ಗೃಹ ಸಚಿವ ಶಿವರಾಜ್ ಪಾಟೀಲ್ ತೆರಳುವರು ಎಂದು ಮೂಲಗಳು ತಿಳಿಸಿವೆ.

ಕಳೆದ ಶನಿವಾರ ನಗರದ 17 ಕಡೆಗಳಲ್ಲಿ ಬಾಂಬ್ ಸ್ಫೋಟಗೊಂಡು 45 ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಂಡು ಒಬ್ಬರು ಮೃತಪಟ್ಟು ಅನೇಕ ಗಾಯಗೊಂಡಿದ್ದರು. ಘಟನೆಯನ್ನು ಖಂಡಿಸಿರುವ ಉಭಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡು ಅಹಮದಾಬಾದ್ ನಗರದ ಸಿವಿಲ್, ಎಲ್ ಜಿ ಹಾಗೂ ವಾದಿಲಾಲ್ ಸಾರಬಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ವಿಚಾರಣೆ ನಡೆಸಲಿದ್ದಾರೆ. ಕೇಂದ್ರದಿಂದ ಅಗತ್ಯ ಸಿಬ್ಬಂದಿಯನ್ನು ಈಗಾಗಲೇ ರವಾನಿಸಲಾಗಿದೆ ಎಂದು ಗೃಹ ಸಚಿವ ಶಿವರಾಜ್ ಪಾಟೀಲ್ ಪುನರುಚ್ಚರಿಸಿದ್ದಾರೆ.

(ಏಜೆನ್ಸೀಸ್)

ಅಹಮದಾಬಾದ್ ಸ್ಫೋಟ ಸಿಮಿ ಉಗ್ರನ ಬಂಧನ
ಸರಣಿ ಸ್ಫೋಟ :ರಾಷ್ಟ್ರದಾದ್ಯಂತ ಭಾರಿ ಕಣ್ಗಾವಲು
ಇದು ಹೇಡಿಗಳ ಕೃತ್ಯ, ನರೇಂದ್ರ ಮೋದಿ ಆಕ್ರೋಶ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X