ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರ ನಿಗ್ರಹಕ್ಕೆ ಶೀಘ್ರದಲ್ಲೇ ಹೊಸ ನೀತಿ:ಬಿಎಸ್ ವೈ

By Staff
|
Google Oneindia Kannada News

ಬೆಂಗಳೂರು, ಜು. 28 : ಉಗ್ರರನ್ನು ನಿಗ್ರಹಿಸಲು ರಾಜ್ಯ ಸರ್ಕಾರ ನೂತನ ನೀತಿಯೊಂದನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಶುಕ್ರವಾರ ನಗರದ 8 ಕಡೆ ಮತ್ತು ಗುರುವಾರ ರಾಮನಗರ ತಾಲ್ಲೂಕು ಚನ್ನಪಟ್ಟಣದ ರಸ್ತೆಯ ಪಕ್ಕದಲ್ಲಿ ಹುದುಗಿಸಿಟ್ಟು ಬಾಂಬ್ ಸ್ಫೋಟಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು ರಾಜ್ಯದ ಸುರಕ್ಷತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಶಿವಮೊಗ್ಗ ಪ್ರವಾಸವನ್ನು ರದ್ದುಪಡಿಸಿ ಸಚಿವ ಸಂಪುಟದ ಸಭೆ ಕರೆದು ಆ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದ ಮಹಾನಗರ ಪಾಲಿಕೆಯ ಎಲ್ಲ ನಗರಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿ ಗಂಟೆಗೊಮ್ಮೆ ನಗರದ ಶಾಂತಿ ಮತ್ತು ಸುವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದ ಐತಿಹಾಸಿಕ ತಾಣಗಳು, ಧಾರ್ಮಿಕ ಕೇಂದ್ರಗಳು,ಸಾಫ್ಟವೇರ್ ಕಂಪನಿಗಳು ಸೇರಿದಂತೆ ಸಾರ್ವಜನಿಕರಿಗೆ ಸೂಕ್ತ ಭದ್ರತೆಯನ್ನು ಒದಗಿಸುವುದು ಸರ್ಕಾರದ ಗುರಿಯಾಗಿದೆ. ರಾಜ್ಯದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ರಾಜ್ಯದ ಯಾವ ಭಾಗದಲ್ಲೇ ಆಗಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳು ಕಂಡು ಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ತಿಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡರು.

ಕೋರಮಂಗಲದ ಫೋರಂ ಮಾಲ್ ಬಳಿ ಜೀವಂತ ಬಾಂಬ್ ವೊಂದನ್ನು ನಿಷ್ಕ್ರಿಯಗೊಳಿಸಿದರ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆಯ ವರದಿ ಬಂದ ನಂತರ ಮುಂದಿನ ಕ್ರಮಗಳ ಬಗ್ಗೆ ಹೇಳುವುದಾಗಿ ಅವರು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಉಗ್ರರ ನಿಗ್ರಹಕ್ಕೆ ಕೋಕಾ ಕಾಯ್ದೆ ಅಗತ್ಯ: ಬಿಎಸ್‌ವೈ
ಬಾಂಬ್ ಸ್ಫೋಟ: ಸುಳಿವು ನೀಡಿದವರಿಗೆ ಲಕ್ಷ ರು. ಬಹುಮಾನ
ಸರಣಿ ಸ್ಫೋಟ :ರಾಷ್ಟ್ರದಾದ್ಯಂತ ಭಾರಿ ಕಣ್ಗಾವಲು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X