ಉಪಸಭಾಪತಿಯಾಗಿ ಬೋಪಯ್ಯ ಆಯ್ಕೆ ಖಚಿತ

ಬೆಂಗಳೂರು, ಜು. 29 : ವಿರಾಜಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ 13 ವಿಧಾನಸಭೆಯ ನೂತನ ಉಪಸಭಾಪತಿಯಾಗಿ ಆಯ್ಕೆಗೊಂಡಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಬೋಪಯ್ಯ ಅವರ ನಾಮಪತ್ರ ಬಿಟ್ಟು ಬೇರೆ ಯಾವ ಪಕ್ಷದಿಂದಲೂ ನಾಮಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಬೋಪಯ್ಯ ಅವರು ಅವಿರೋಧವಾಗಿ ಆಯ್ಕೆಯಾದರು.

ಸೋಮವಾರ ವಿಧಾನಸಭೆಯಲ್ಲಿ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಲಾಯಿತು. ಈ ಮೂಲಕ ಸಭಾಪತಿ, ಉಪಸಭಾಪತಿ ಇಬ್ಬರು ಬಿಜೆಪಿ ಪಕ್ಷದವರಾಗಿದ್ದಾರೆ. ಬಿಜೆಪಿ ಹಿರಿಯ ಶಾಸಕ ಜಗದೀಶ್ ಶೆಟ್ಟರ್ ಸಭಾಧ್ಯಕ್ಷರಾಗಿದ್ದಾರೆ. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಸಭಾಪತಿ ಹುದ್ದೆಯಲ್ಲಿ ಜೆಡಿಎಸ್ ನ ಕೃಷ್ಣ ಅವರಿದ್ದರು. ಕಾಂಗ್ರೆಸ್ ನ ಮೂಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು.

ಬಿಜೆಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಬೋಪಯ್ಯ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದ್ದರು. ಆದರೆ ಬೋಪಯ್ಯ ಬಿಜೆಪಿ ಹಿರಿಯ ಸಚಿವರಾಗಿದ್ದರಿಂದ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷೇತರರು ಹಾಗೂ ಪಕ್ಷಾಂತರಿಗಳಿಗೆ ಮಣಿ ಹಾಕುವ ಅನಿವಾರ್ಯತೆ ಎದುರಾಗಿದ್ದರಿಂದ ಬೋಪಯ್ಯ ಸಚಿವ ಸ್ಥಾವದಿಂದ ವಂಚಿತರಾಗಬೇಕಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+