ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರಣಿ ಸ್ಫೋಟ ಘಟನೆಗೆ ವಿಶ್ವಸಂಸ್ಥೆ ತೀವ್ರ ಖಂಡನೆ

By Staff
|
Google Oneindia Kannada News

Bangalore bomb blast july 25ವಾಷಿಂಗ್ಟನ್, ಜು. 29 : ಬೆಂಗಳೂರು ಮತ್ತು ಅಹಮದಾಬಾದ್ ನಲ್ಲಿ ಭಯೋತ್ಪಾದಕರು ನಡೆಸಿದ ಸರಣಿ ಬಾಂಬ್ ಸ್ಫೋಟದ ದುಷ್ಕೃತ್ಯವನ್ನು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೋನ್ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಹೇಡಿಗಳ ಕೃತ್ಯವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉಗ್ರರಅಟ್ಟಹಾಸ ಮೇರೆ ಮೀರಿದ್ದು ಇದನ್ನು ತಡೆಯಲು ಎಲ್ಲ ರಾಷ್ಟ್ರಗಳು ಸಿದ್ಧರಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಕಳೆದ ವಾರ ಭಾರತದ ಬೆಂಗಳೂರು ಮತ್ತು ಅಹಮದಾಬಾದ್ ನಲ್ಲಿ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಉಗ್ರರು ಸರಣಿ ಬಾಂಬ್ ಸ್ಫೋಟಗೊಳಿಸಿ ದೇಶವನ್ನೇ ತಲ್ಲಣಗೊಳಿಸಿದ್ದರು. ಸ್ಫೋಟದ ಪರಿಣಾಮ ಅಹಮದಾಬಾದ್ ನಲ್ಲಿ 49 ಮಂದಿ ಮೃತಪಟ್ಟಿದ್ದು, ನೂರಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಹಾಗೆಯೇ ಬೆಂಗಳೂರಿನಲ್ಲಿ ಕೂಡಾ ಸರಣಿ ಬಾಂಬ್ ಸ್ಫೋಟ ನಡೆಸಿದ ಉಗ್ರರು ಒಬ್ಬ ಮಹಿಳೆ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜರುಗಿತ್ತು.

ಭಾರತದ ತುಂಬೆಲ್ಲಾ ಭಯದ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಆತಂಕ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅವರು, ಆ ಕುಟುಂಬಕ್ಕೆ ಮೃತರನ್ನು ಕಳೆದುಕೊಂಡಿರುವ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ. ಹಾಗೂ ಭಾರತ ಸರ್ಕಾರ ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳ ಯೋಗಕ್ಷೇಮದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಸೂಚಿಸಿದ್ದಾರೆ.

(ಏಜೆನ್ಸಿಸ್)

ಅಹಮದಾಬಾದ್‌ಗೆ ಪ್ರಧಾನಿ, ಸೋನಿಯಾ ಭೇಟಿ
ಸರಣಿ ಸ್ಫೋಟ :ರಾಷ್ಟ್ರದಾದ್ಯಂತ ಭಾರಿ ಕಣ್ಗಾವಲು
ಇದು ಹೇಡಿಗಳ ಕೃತ್ಯ, ನರೇಂದ್ರ ಮೋದಿ ಆಕ್ರೋಶ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X