ಆ.2ರಂದು ವಿಶ್ವೇಶ್ವರ ಭಟ್ರ ಕೃತಿಗಳು ಬಿಡುಗಡೆ
ಬೆಂಗಳೂರು, ಆ.1: ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ ಭಟ್ ಅವರ ಒಟ್ಟು ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ ಆ.2ರಂದು ನಡೆಯಲಿದೆ. 'ಕಲಾಮ್ ಕಮಾಲ್', 'ಅಂಜಿಕೆಯಿಲ್ಲದ ಕರಂಜಿಯಾ', 'ಹೂ ಬಿಸಿಲಿನ ನೆರಳು' ಮತ್ತು 'ಸಂಪಾದಕ ಅಂದ್ರೆ ಗಂಡ ಇದ್ದಂತೆ' ಕೃತಿಗಳು ಲೋಕಾರ್ಪಣೆಯಾಗಲಿವೆ.
ಅಂಕಿತ ಪುಸ್ತಕ ಪ್ರಕಟಿಸಿರುವ ಈ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಮಾಜಿ ಸಚಿವ ಬಿ.ಎಲ್.ಶಂಕರ್, ಮೈಸೂರು ಪ್ರಿಂಟರ್ಸ್ ಪ್ರೈ.ಲಿ. ನಿರ್ದೇಶಕ ಕೆ.ಎನ್.ಶಾಂತಕುಮಾರ್, ಅಗ್ನಿ ವಾರಪತ್ರಿಕೆ ಸಂಪಾದಕ ಅಗ್ನಿ ಶ್ರೀಧರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
(ದಟ್ಸ್ಕನ್ನಡ ಸಭೆ-ಸಮಾರಂಭ)


Click it and Unblock the Notifications
