ಬಿಡಿಎದಿಂದ 25 ಕೋಟಿ ರು. ಆಸ್ತಿ ವಶ
ಬೆಂಗಳೂರು, ಆ. 2 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅನಧಿಕೃತ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು ಬೆಂಗಳೂರು ಉತ್ತರ ವಿಭಾಗದ ಎನ್ಜಿಇಎಫ್ ಪೂರ್ವ ಬಡಾವಣೆಯಲ್ಲಿ 25 ಕೋಟಿ ರು. ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.
ಬಾಣಸವಾಡಿ ಗ್ರಾಮದ ಸರ್ವೆ ನಂ. 121ರ ಎನ್ಜಿಇಎಫ್ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 1 ಆರ್ಸಿಸಿ ಕಟ್ಟಡ, 6 ಎಸಿ ಶೀಟ್ ಶೆಡ್ ಮತ್ತು ಕಂಪೌಂಡ್ ಗೋಡೆಯನ್ನು ನೆಲಸಮ ಮಾಡಿ ಒಟ್ಟು 1 ಎಕರೆ ಎಂಟೂವರೆ ಗುಂಟೆ ಜಮೀನನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರಕ್ಷಕ ಅಧೀಕ್ಷಕರು ಮತ್ತು ಉತ್ತರ ವಿಭಾಗದ ಕಾರ್ಯಪಾಲಕ ಅಭಿಯಂತರ ಅವರ ಮೇಲ್ವಿಚಾರಣೆಯಲ್ಲಿ ಪೊಲೀಸ್ ಸಹಕಾರದೊಂದಿಗೆ ನಡೆಸಲಾಗಿದೆ. ವಶಪಡಿಸಿಕೊಂಡ ಜಾಗಕ್ಕೆ ತಂತಿಬೇಲಿಯನ್ನು ಅಳವಡಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
