ಕೆಪಿಸಿಸಿ ಅದ್ಯಕ್ಷತೆ ಯಾರ ಮುಡಿಗೆ?
ನವದೆಹಲಿ, ಆ. 2 : ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷಗಿರಿ ಆಯ್ಕೆ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದೆ. ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ದಿಢೀರನೆ ನವದೆಹಲಿಗೆ ತೆರಳಿರುವುದು ಅನೇಕರ ಹುಬ್ಬು ಏರುವಂತೆ ಮಾಡಿದೆ.
ಮಲ್ಲಿಕಾರ್ಜುನ ಖರ್ಗೆಯವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮಾಡುವ ಅಗತ್ಯ ಬಿದ್ದಿತ್ತು. ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹಿರಿಯ ನಾಯಕರಿಗಿಂತ ಯುವ ನಾಯಕರಿಗೆ ಅವಕಾಶ ಕೊಡಬೇಕೆಂಬ ಮಾತುಗಳು ಹೈಕಮಾಂಡ್ ವಲಯದಲ್ಲಿ ಆಡುತ್ತಿರುವುದರಿಂದ ಆಯ್ಕೆ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆ ದೊರೆತಿದೆ.
ವಿರೋಧ ಪಕ್ಷದ ಆಯ್ಕೆ ಮಾಡುವಾಗ ಸಿದ್ದರಾಮಯ್ಯ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಹದ್ದೆಯ ಆಕಾಂಕ್ಷಿಯಾಗಿದ್ದರು. ಖರ್ಗೆಯವರನ್ನು ಆಯ್ಕೆ ಮಾಡಿದ ನಂತರ ಬಹಿರಂಗವಾಗಿ ತಮ್ಮ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ತಾವು ಪಕ್ಷದ ಸಾಮಾನ್ಯ ಕಾರ್ಯಕರ್ತ ಮಾತ್ರ. ಹೈಕಮಾಂಡ್ ನೀಡುವ ಯಾವುದೇ ಹುದ್ದೆಯನ್ನು ಶ್ರದ್ಧೆಯಿಂದ ನಿಭಾಯಿಸುವುದಾಗಿ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
