ರಾಜ್ಯದಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ
ಕುಕ್ಕೆ ಸುಬ್ರಹ್ಮಣ್ಯ, ಆ.4: ಕರ್ನಾಟಕದಲ್ಲಿ ಮುಂದಿನ ಐದು ವರ್ಷಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬೃಹತ್ ಯೋಜನೆಗೆ 180 ಕೋಟಿ ರು.ಗಳನ್ನು ಬಿಡುಗಡೆ ಮಾಡಿದ ನಂತರ ಭಾನುವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೂರು, ಉಡುಪಿ, ಕಟೀಲು, ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಪರಿಚಯಲಾಗಿಸುತ್ತದೆ ಎಂದರು. ಬರೀ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಡುವ ಭಕ್ತಾದಿಗಳ ಅನುಕೂಲಕ್ಕಾಗಿ ಈ ಯೋಜನೆ ಉದ್ದೇಶಿಸಿದ್ದಲ್ಲ, ರಾಜ್ಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಂಗಳೂರು ಮತ್ತು ಬೆಂಗಳೂರು ನಡುವೆ ಸಂಚರಿಸುವ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಸರ್ಕಾರವನ್ನು ಒತ್ತಾಯಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬಿಣದ ಅದಿರು ಸಾಗಿಸುವ ಬೃಹತ್ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವುದರೊಂದಿಗೆ ರಸ್ತೆ ಹಾಳಾಗುವುದನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯ ಪಟ್ಟರು.
(ದಟ್ಸ್‌ಕನ್ನಡ ವಾರ್ತೆ)
ಕೊಲ್ಲೂರಿನಲ್ಲಿ ಯಡಿಯೂರಪ್ಪ ಚಂಡಿಕಾ ಹೋಮ












Click it and Unblock the Notifications