• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಾಗರಭಾವಿ ವೃತ್ತದ ಬಳಿ ನಿಗೂಢ ಸ್ಫೋಟ!

By Staff
|

ಬೆಂಗಳೂರು, ಆ. 8 : ನಗರದ ನಾಗರಭಾವಿ ವೃತ್ತದ ಬಳಿ ಇರುವ ಹೊಯ್ಸಳ ನಗರದ ಹೊಟೇಲೊಂದರ ಹಿಂಭಾಗದ ತಿಪ್ಪೆಗುಂಡಿಯಲ್ಲಿ ಮಧ್ಯಾಹ್ನ 12.45ರ ಹೊತ್ತಿಗೆ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಯಾವುದೇ ಹಾನಿ ಉಂಟಾಗಿಲ್ಲ. ಆದರೆ ಸುತ್ತಲಿನ ನಿವಾಸಿಗಳು ಭಯಭೀತರಾಗಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಗೊಂಡಿರುವುದು ಬಾಂಬೋ ಅಥವಾ ಪಟಾಕಿಯೋ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಬಾಂಬ್ ನಿಷ್ಕ್ರಿಯದಳ ಆಗಮಿಸಿ ತಪಾಸಣೆ ನಡೆಸಿದೆ. ತನಿಖೆಯ ನಂತರ ಸ್ಫೋಟಗೊಂಡಿರುವ ಬಗ್ಗೆ ಸಂಪೂರ್ಣ ವರದಿ ದೊರೆಯಲಿದೆ.

ಜುಲೈ 25ರಂದು ಬೆಂಗಳೂರಿನಲ್ಲಿ ಮತ್ತು ಮರುದಿನ ಜುಲೈ 26ರಂದು ಅಹಮದಾಬಾದ್ ನಗರಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ನಡೆಸಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದರು. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟು, ಐವರು ಗಾಯಗೊಂಡಿದ್ದರು. ಈ ದುಷ್ಕ್ರತ್ಯ ಹಸಿರಿರುವಾಗಲೇ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿರುವುದು ಸಹಜವಾಗಿ ಜನತೆ ಭಯಬೀತರಾಗುವಂತೆ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಕರೆ

ಬಾಂಬ್ ನಿಷ್ಕ್ರಿಯಗೊಳಿಸಿದ ಸುಕುಮಾರ್‌ಗೆ ಬಹುಮಾನ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more