• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಸ್ತ್ರೀಯ ಸ್ಥಾನಮಾನ : ಕರವೇ ಹೋರಾಟ ಜಾರಿ

By Staff
|

ಬೆಂಗಳೂರು, ಆ. 10 : ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ವಿಷಯದಲ್ಲಿ ತಮಿಳುನಾಡು ಅಡ್ಡಗಾಲು ಹಾಕುತ್ತಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಕಾರ್ಯಕರ್ತರು ಭಾನುವಾರ ತಮಿಳುನಾಡಿನ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರವು ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ನೀಡುವ ಸಲುವಾಗಿ ತಜ್ಞರ ಸಮಿತಿಯನ್ನು ರಚಿಸಿತ್ತು. ಆದರೆ ತಮಿಳುನಾಡಿನ ಹಿರಿಯ ಆರ್.ಗಾಂಧಿ ಎನ್ನುವವರು ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಸದಸ್ಯರ ಅರ್ಹತೆಯನ್ನೇ ಪ್ರಶ್ನಿಸಿ ಚೆನ್ನೈ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆಯುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು ತಮಿಳುನಾಡಿನ ಕ್ರಮವನ್ನು ವಿರೋಧಿಸಿ ಘೋಷಣೆ ಕೂಗಿದರು. ಅಲ್ಲದೇ ತಮಿಳುನಾಡಿನ ಬಸ್ ಗಳನ್ನು ತಡೆದು ಕನ್ನಡಿಗರು ಮತ್ತು ಕನ್ನಡನಾಡಿನ ವಿಷಯಕ್ಕೆ ಪದೆಪದೇ ತಲೆಹಾಕುತ್ತಿರುವ ತಮಿಳುನಾಡಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶಾಂತಯುತವಾಗಿ ಪ್ರತಿಭಟನೆ ನಡೆಸುವಂತೆ ಪೊಲೀಸರು ಪ್ರತಿಭಟನಾಕಾರಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಶನಿವಾರ ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ರೈಲುಗಳಿಗೆ ಸಹಾ ತಡೆ ಒಡ್ಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ರಕ್ಷಣಾ ವೇದಿಕೆ ಮುಖಂಡ ಗುರುಮೂರ್ತಿ, ಕಾವೇರಿ ನದಿ ನೀರು ಹಂಚಿಕೆ, ವಿವಾದಿತ ಹೊಗೇನಕಲ್ ಜಲಾಶಯ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ವಿಷಯಗಳಲ್ಲಿ ತಮಿಳುನಾಡು ತಲೆಹಾಕುತ್ತಿದೆ. ಕನ್ನಡಿಗರಿಗೆ ಅನ್ಯಾಯ ಮಾಡುವುದೇ ಏಕೈಕ ಗುರಿ ಎನ್ನುವ ಹಾಗೆ ತಮಿಳುನಾಡಿನ ಸರ್ಕಾರ ಮತ್ತು ಅಲ್ಲಿಯ ಜನರು ವರ್ತಿಸುತ್ತಿದ್ದಾರೆ. ಕನ್ನಡಿಗರ ಭಾವನೆಗೆ ದಕ್ಕೆ ತರುವಂಥ ಕೆಲಸಗಳು ಅನೇಕ ಸಾರಿ ನಡೆದಿವೆ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡದರು.

ಮುಂದಿನ ದಿನಗಳಲ್ಲಿ ತಮಿಳುನಾಡು ಅನುಸರಿಸುತ್ತಿರುವ ನೀತಿಯನ್ನು ಖಂಡಿಸಿ ಉಗ್ರವಾದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುವುದು ಎಂದ ಅವರು, ರಾಜ್ಯ ಸರ್ಕಾರ ಕನ್ನಡದ ವಿಷಯದಲ್ಲಿ ಗಟ್ಟಿ ನಿರ್ಧಾರವನ್ನು ಪ್ರದರ್ಶಿಸಬೇಕು ಎಂದು ಅವರು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

ಶಾಸ್ತ್ರೀಯ ಸ್ಥಾನಕ್ಕೆ ತಮಿಳರ ವಿರೋಧ; ಕರವೇ ಪ್ರತಿಭಟನೆ

ಶಾಸ್ತ್ರೀಯ ಸ್ಥಾನಮಾನ : ಸುಪ್ರಿಂಕೋರ್ಟ್ ಗೆ ಮೊರೆ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more