ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ : ಶಿಬು

ಜಾರ್ಖಂಡ್, ಆ. 12 : ಶೀಘ್ರದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನವನ್ನು ತಮಗೆ ನೀಡದಿದ್ದಲ್ಲಿ ಕೇಂದ್ರದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳಲಾಗುವುದು ಜೆಎಂಎಂ ಮುಖಂಡ ಶಿಬು ಸೋರೆನ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ವಿಶ್ವಾಸಮತದ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ನೀಡಿದ್ದ ಭರವಸೆಯನ್ನು ಶೀಘ್ರದಲ್ಲಿ ಈಡೇರಿಸದಿದ್ದರೆ ಕೇಂದ್ರದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲ ಹಾಗೂ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

ಆ. 17ರಂದು ಜೆಎಂಎಂ ಶಾಸಕರು ಮತ್ತು ಸಂಸದರು ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು. ಕಾಂಗ್ರೆಸ್ ಪಕ್ಷ ವಿಶ್ವಾಸಮತಕ್ಕೂ ಮುನ್ನ ನೀಡಿದ್ದ ವಚನವನ್ನು ಉಳಿಸಿಕೊಳ್ಳಲಿದೆ ಎನ್ನುವ ವಿಶ್ವಾಸವಿದೆ. ತಪ್ಪಿದಲ್ಲಿ ಪಕ್ಷದ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಶಿಬು ಸೋರೇನ್ ಕೇಂದ್ರ ಯುಪಿಎ ಸರ್ಕಾರದಲ್ಲಿ ಕಲ್ಲಿದ್ದಲು ಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಕೊಲೆ ಆಪಾದನೆಯ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪರಮಾಣು ಒಪ್ಪಂದದ ಬಿಕ್ಕಟ್ಟಿನಲ್ಲಿ ಎಡಪಕ್ಷಗಳು ಯುಪಿಎ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದವು. ಈ ಸಂದರ್ಭದಲ್ಲಿ ಯುಪಿಎ ಗೆ ಬಹುಮತ ಸಾಬೀತುಪಡಿಸುವುದು ಅನಿವಾರ್ಯವಾಗಿತ್ತು. ಸಮಾಜವಾದಿ ಪಕ್ಷ ಯುಪಿಎಗೆ ಬೆಂಬಲ ಘೋಷಿಸಿದ್ದರೂ, ಮ್ಯಾಜಿಕ್ ಸಂಖ್ಯೆಯ ಕೊರತೆಯನ್ನು ಯುಪಿಎ ಎದುರಿಸುತ್ತಿತ್ತು. 5 ಸಂಸದರನ್ನು ಹೊಂದಿರುವ ಜೆಎಂಎಂ ಯುಪಿಎ ಬೆಂಬಲ ಘೋಷಿಸುವುದರ ಮೂಲಕ ಯುಪಿಎ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಯುಪಿಎಗೆ ಬೆಂಬಲ ನೀಡಲು ಶಿಬು ಸೋರೇನ್ ಕೆಲ ಷರತ್ತುಗಳನ್ನು ವಿಧಿಸಿದ್ದರು. ಮುಖ್ಯವಾಗಿ ತಮ್ಮ ಕೇಂದ್ರ ಸಚಿವರನ್ನಾಗಿ ಮಾಡಬೇಕು ಎನ್ನುವುದು. ಆದರೆ ಸೋರೆನ್ ಇದೀಗ ರಾಗ ಬದಲಿಸಿದ್ದು, ನನ್ನನ್ನು ಜಾರ್ಖಂಡ್ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇಲ್ಲದಿದ್ದರೆ ಕೇಂದ್ರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+