ಮತಗಳಿಕೆಗೆ ಮಾಯಾ ಬ್ಲಾಕ್ ಮೇಲ್ ತಂತ್ರ:ಕಾಂಗ್ರೆಸ್

ಲಕ್ನೋ, ಆ. 12 : ಮುಖ್ಯಮಂತ್ರಿ ಮಾಯಾವತಿಯವರು ಮತ ಗಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಂದ ತಮಗೆ ಜೀವ ಭಯವಿದೆ ಎಂದು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಜನಸಾಮಾನ್ಯರ ಭಾವನೆಯನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಟೀಕಿಸಿದೆ.

ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಅಹಿಂಸೆಯಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷ ಅಂಥ ನೀಚ ಕೆಲಸಕ್ಕೆ ಕೈಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮತಗಳಿಸಲು ಎಂಥ ಕೆಲಸಕ್ಕಾದರೂ ಕೈಹಾಕಲು ಸಿದ್ಧ ಎನ್ನುವುದನ್ನು ಮಾಯವತಿ ಈ ಮೂಲಕ ಸಾಬೀತುಪಡಿಸಿದ್ದಾರೆ. ಜತೆಗೆ ಅಮಾಯಕ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದರು.

ನಾನು ಹಿಂದುಳಿದ ಜನಾಂಗದಿಂದ ಬಂದಿರುವುದರಿಂದ ಕಾಂಗ್ರೆಸ್ ಮುಖಂಡರಿಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎನ್ನುವ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಅವರು, ಹಿಂದುಳಿದ ಜನಾಂಗ ಬಂದಿರುವ ಅವರು ಸರ್ವಾಧಿಕಾರಿ ವರ್ತಿಸುತ್ತಿದ್ದಾರೆ ಎನ್ನುವುದನ್ನು ಅನೇಕ ಸಲ ಸಾಬೀತುಪಡಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಾಯಾವತಿ ಅಧಿಕಾರಕ್ಕಾಗಿ ಬಿಎಸ್ ಪಿ ಪಕ್ಷದ ಸಂಸ್ಥಾಪಕ ಕಾನ್ಷಿರಾಮ್ ಅವರನ್ನು ಮೂಲೆ ಗುಂಪು ಮಾಡಿರುವುದು ದೇಶಕ್ಕೆ ಗೊತ್ತಿರುವ ಸಂಗತಿ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ನೀತಿ, ಸಿದ್ಧಾಂತಗಳನ್ನು ಎಂದಾದರೂ ಪಾಲಿಸಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ತಮ್ಮ ಮೂರ್ತಿಯನ್ನು ಎಲ್ಲೆಂದರಲ್ಲಿ ಸ್ಥಾಪಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬರುವ ಚುನಾವಣೆಯಲ್ಲಿ ಮತ ಗಳಿಸುವ ಸಲುವಾಗಿ ಮಾಯಾವತಿ ಮತ್ತೊಂದು ನಾಟಕ ಆಡುತ್ತಿದ್ದಾರೆ. ಆದರೆ ಜನರು ಇದರ ಅರಿವು ಸ್ಪಷ್ಟವಾಗಿದೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಕಳೆದ ಕೆಲ ದಿನಗಳ ಹಿಂದೆ ಮಾಯಾವತಿ ಕಾಂಗ್ರೆಸ್ ಕೆಲ ಮುಖಂಡರು ನಾನು ಕೀಳು ಜನಾಂಗದವಳು ಎನ್ನುವ ಕಾರಣಕ್ಕೆ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿದ್ದಾರೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+