ಆ.20ರಂದು ಬ್ಯಾಂಕ್ ಅಧಿಕಾರಿಗಳ ಮುಷ್ಕರ
ಬೆಂಗಳೂರು, ಆ.13: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್20ರಂದು ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ರಾಜ್ಯ ಘಟಕಗಳು ಮುಷ್ಕರ ನಡೆಸಲಿವೆ.
ವಿವಿಧ ಬ್ಯಾಂಕುಗಳನ್ನು ವಿಲೀನ ಪ್ರಕ್ರಿಯೆಯನ್ನು ಕೈ ಬಿಡಬೇಕು ಹಾಗೂ ಸಾರ್ವಜನಿಕ ಬ್ಯಾಂಕುಗಳನ್ನು ವಿದೇಶಿ ಪಾಲುದಾರಿಕೆಯಲ್ಲಿ ಖಾಸಗೀಕರಣಗೊಳಿಸುವ ಶಿಫಾರಸನ್ನು ತಿರಸ್ಕರಿಸಬೇಕೆಂಬ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಕರೆಕೊಡಲಾಗಿದೆ. ಈ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಕರ್ನಾಟಕ ಶಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿಶ್ವನಾಥ್ ನಾಯಕ್ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಸಂತ ರೈ, ಕಾರ್ಯದರ್ಶಿಗಳಾದ ಪಿ.ಆರ್.ಕಾರ್, ಎ.ಬಿ.ಶೆಟ್ಟಿ ಹಾಗೂ ಜಂಟಿ ಕಾರ್ಯದರ್ಶಿ ಎಂ.ಆಂಜನಿ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
(ದಟ್ಸ್‌ಕನ್ನಡ ವಾರ್ತೆ)











Click it and Unblock the Notifications